ಪಶ್ಚಿಮ ಬಂಗಾಳ: ಬಾಂಬ್ ಸ್ಫೋಟದಲ್ಲಿ ಓರ್ವನಿಗೆ ತೀವ್ರ ಗಾಯ

ಸಾಂದರ್ಭಿಕ ಚಿತ್ರ (PTI)
ಮೂವರು ಶಂಕಿತರ ಬಂಧನ
ಕೋಲ್ಕತಾ,ಸೆ.15: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಓರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು,ಘಟನೆಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.
ರವಿವಾರ ರಾತ್ರಿ ಜಿಲ್ಲೆಯ ರಾಣಿನಗರದಲ್ಲಿ ನಾಲ್ವರು ವ್ಯಕ್ತಿಗಳು ಕಚ್ಚಾ ಬಾಂಬ್ಗಳನ್ನು ತಯಾರಿಸುತ್ತಿದ್ದಾಗ ಅವುಗಳಲ್ಲೊಂದು ಸ್ಫೋಟಿಸಿತ್ತು ಎಂದು ಹಿರಿಯ ಪೋಲಿಸ್ ಅಧಿಕಾರಿಯೋರ್ವರು ತಿಳಿಸಿದರು.
ಗಾಯಾಳುವನ್ನು ಮುರ್ಷಿದಾಬಾದ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು,ಇತರ ಮೂವರನ್ನು ಬಂಧಿಸಲಾಗಿದೆ. ಈ ಬಗ್ಗೆ ತನಿಖೆ ಪ್ರಗತಿಯಲ್ಲಿದೆ ಎಂದರು.
Next Story





