Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶಲ್‌ಬ್ಲೋವರ್ ಪ್ರಕರಣ | ಹಿಂದೆ ಸರಿದ...

ವಿಶಲ್‌ಬ್ಲೋವರ್ ಪ್ರಕರಣ | ಹಿಂದೆ ಸರಿದ ಮತ್ತಿಬ್ಬರು; ವಿಚಾರಣೆಗೆ ನಿರಾಕರಿಸಿದ ನ್ಯಾಯಾಧೀಶರ ಸಂಖ್ಯೆ 13ಕ್ಕೇರಿಕೆ

ವಾರ್ತಾಭಾರತಿವಾರ್ತಾಭಾರತಿ22 Feb 2025 6:02 PM IST
share
ವಿಶಲ್‌ಬ್ಲೋವರ್ ಪ್ರಕರಣ | ಹಿಂದೆ ಸರಿದ ಮತ್ತಿಬ್ಬರು; ವಿಚಾರಣೆಗೆ ನಿರಾಕರಿಸಿದ ನ್ಯಾಯಾಧೀಶರ ಸಂಖ್ಯೆ 13ಕ್ಕೇರಿಕೆ

ಡೆಹ್ರಾಡೂನ್(ಉತ್ತರಾಖಂಡ): ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ)ಯ ಇಬ್ಬರು ನ್ಯಾಯಾಧೀಶರಾದ ಹರ್ವಿಂದರ್ ಕೌರ್ ಒಬೆರಾಯ್ ಮತ್ತು ಬಿ.ಆನಂದ ಅವರು ಐಎಫ್‌ಎಸ್ ಅಧಿಕಾರಿ ಸಂಜೀವ ಚತುರ್ವೇದಿ ಅವರಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯಿಂದ ಹಿಂದಕ್ಕೆ ಸರಿದಿದ್ದಾರೆ. ಇದರೊಂದಿಗೆ ಚತುರ್ವೇದಿಯವರ ಪ್ರಕರಣಗಳ ವಿಚಾರಣೆಗೆ ನಿರಾಕರಿಸಿದ ನ್ಯಾಯಾಧೀಶರ ಒಟ್ಟು ಸಂಖ್ಯೆ 13ಕ್ಕೇರಿದ್ದು, ಇದು ಒಂದು ರೀತಿಯಲ್ಲಿ ದಾಖಲೆಯಾಗಿದೆ ಎನ್ನುತ್ತಾರೆ ಕಾನೂನು ತಜ್ಞರು.

ಈವರೆಗೆ ಸರ್ವೋಚ್ಛ ನ್ಯಾಯಾಲಯದ ಇಬ್ಬರು ಮತ್ತು ಉತ್ತರಾಖಂಡ ಉಚ್ಛ ನ್ಯಾಯಾಲಯದ ಇಬ್ಬರು ನ್ಯಾಯಾಧೀಶರು, ಸಿಎಟಿ ಅಧ್ಯಕ್ಷರು,ಶಿಮ್ಲಾ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು,ದಿಲ್ಲಿ ಮತ್ತು ಅಲಹಾಬಾದ್ ಪೀಠಗಳ ಏಳು ಸಿಎಟಿ ನ್ಯಾಯಾಧೀಶರು ಚತುರ್ವೇದಿಯವರ ಪ್ರಕರಣಗಳ ವಿಚಾರಣೆಯಿಂದ ದೂರವುಳಿದಿದ್ದಾರೆ.

ನ್ಯಾಯಮೂರ್ತಿಗಳಾದ ಒಬೆರಾಯ್ ಮತ್ತು ಆನಂದ ಅವರ ಸಿಎಟಿ ಪೀಠವು ತನ್ನ ಫೆ.19ರ ಇತ್ತೀಚಿನ ಆದೇಶದಲ್ಲಿ, ನಿರ್ಧಿಷ್ಟ ಕಾರಣಗಳನ್ನು ಒದಗಿಸದೆ ಚತುರ್ವೇದಿಯವರ ಪ್ರಕರಣಗಳನ್ನು ಇನ್ನು ಮುಂದೆ ಪಟ್ಟಿ ಮಾಡದಂತೆ ರಿಜಿಸ್ಟ್ರಿಗೆ ನಿರ್ದೇಶ ನೀಡಿದೆ.

ಪ್ರಕರಣವು ತನ್ನ ಕಕ್ಷಿದಾರರ ಮೌಲ್ಯಮಾಪನ ವರದಿಗೆ ಸಂಬಂಧಿಸಿದೆ ಎಂದು ಚತುರ್ವೇದಿ ಪರ ವಕೀಲ ಸುದರ್ಶನ ಗೋಯೆಲ್ ತಿಳಿಸಿದರು.

ಫೆಬ್ರವರಿ 2024ರಲ್ಲಿ ಉತ್ತರಾಖಂಡ ಉಚ್ಛ ನ್ಯಾಯಾಲಯದ ನ್ಯಾಯಾಧೀಶರು ಚತುರ್ವೇದಿಯವರ ಪ್ರಭಾರ ನಿಯೋಜನೆ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದರು. ಗೋಯೆಲ್ ಪ್ರಕಾರ ಅಧಿಕಾರಿಯ ಸೇವಾ ವಿಷಯಗಳನ್ನು ನೈನಿತಾಲ್ ಸಂಚಾರಿ ಪೀಠದಲ್ಲಿ ಪ್ರತ್ಯೇಕವಾಗಿ ನಡೆಸಬೇಕು ಎಂದು 2018ರಲ್ಲಿ ಉಚ್ಛ ನ್ಯಾಯಾಲಯವು ನಿರ್ದೇಶನ ನೀಡಿದ್ದು,ಇದನ್ನು ಸರ್ವೋಚ್ಛ ನ್ಯಾಯಾಲಯವು ಎತ್ತಿ ಹಿಡಿದಿತ್ತು.

2021ರಲ್ಲಿ ಉಚ್ಛ ನ್ಯಾಯಾಲಯವು ತನ್ನ ನಿಲುವನ್ನು ಪುನರುಚ್ಚರಿಸಿತ್ತು. ಆದರೆ ಕೇಂದ್ರವು ಅದನ್ನು ಪ್ರಶ್ನಿಸಿತ್ತು. 2023ರ ಮಾರ್ಚ್‌ನಲ್ಲಿ ಸರ್ವೋಚ್ಛ ನ್ಯಾಯಾಲಯದ ವಿಭಾಗೀಯ ಪೀಠವು ವಿಷಯವನ್ನು ವಿಸ್ತೃತ ಪೀಠಕ್ಕೆ ಉಲ್ಲೇಖಿಸಿತ್ತು ಎಂದು ಗೋಯೆಲ್ ತಿಳಿಸಿದರು.

2013,ನವಂಬರ್‌ನಲ್ಲಿ ಸರ್ವೋಚ್ಛ ನ್ಯಾಯಾಲಯದ ಆಗಿನ ನ್ಯಾಯಾಧೀಶ ರಂಜನ್ ಗೊಗೊಯಿ ಅವರು ಹರ್ಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ, ಇತರ ರಾಜಕೀಯ ನಾಯಕರು ಮ್ತು ಅಧಿಕಾರಿಗಳನ್ನು ಒಳಗೊಂಡ ಭ್ರಷ್ಟಾಷಾರ ಮತ್ತು ಕಿರುಕುಳ ಆರೋಪಗಳ ಪ್ರಕರಣಗಳ ಬಗ್ಗೆ ಸಿಬಿಐ ತನಿಖೆಯನ್ನು ಕೋರಿ ಚತುರ್ವೇದಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿದಾಗಿನಿಂದ ನಿರಾಕರಣೆಯ ಈ ಪ್ರವೃತ್ತಿ ಆರಂಭಗೊಂಡಿತ್ತು. ಆಗಸ್ಟ್ 2016ರಲ್ಲಿ ಅಂದಿನ ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶ ಯು.ಯು.ಲಲಿತ್ ಅವರು ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದರು.

2007ರಲ್ಲಿ ಹರ್ಯಾಣ ಅರಣ್ಯ ಇಲಾಖೆಯಲ್ಲಿನ ಹಗರಣಗಳನ್ನು ಬಹಿರಂಗಗೊಳಿಸುವ ಮುನ್ನ ಚತುರ್ವೇದಿ ಸುದ್ದಿಯಾಗಿದ್ದರು. ನಂತರ ಐದು ವರ್ಷಗಳಲ್ಲಿ 12 ಸಲ ಅವರು ವರ್ಗಾವಣೆಗೊಂಡಿದ್ದರು. ತನ್ನನ್ನು ಸೇವೆಯಿಂದ ಅಮಾನತುಗೊಳಿಸಿದಾಗ ಚತುರ್ವೇದಿ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದರು. ನಂತರ ಹರ್ಯಾಣ ಸರಕಾರವು ಅವರ ಅಮಾನತು ಆದೇಶವನ್ನು ಹಿಂದೆಗೆದುಕೊಂಡಿತ್ತು.

2012ರಲ್ಲಿ ‘ವಿಶಲ್‌ಬ್ಲೋವರ್’ ಎಂದು ಹೆಸರಿಸಲ್ಪಟ್ಟಿದ್ದ ಚತುರ್ವೇದಿ ರೇಮನ್ ಮ್ಯಾಗ್ಸೆಸೆ ಪ್ರಶಸ್ತಿಗೂ ಭಾಜನರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X