ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡುತ್ತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಮೃತ್ಯು

Screengrab: X
ಮುಂಬೈ : ಮಹಾರಾಷ್ಟ್ರದ ಧಾರಶಿವ ಜಿಲ್ಲೆಯ ಕಾಲೇಜೊಂದರಲ್ಲಿ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡುವಾಗ ವಿದ್ಯಾರ್ಥಿನಿಯೋರ್ವರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಧಾರಶಿವ ಜಿಲ್ಲೆಯ ಪರಂದಾದ ಆರ್ ಜಿ ಶಿಂಧೆ ಕಾಲೇಜಿನಲ್ಲಿ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ವರ್ಶಾ ಎಂದು ಗುರುತಿಸಲಾಗಿದೆ. ಘಟನೆಯ ದೃಶ್ಯ ಸಾಮಾಜಿಕ ಜಾಲತಣಾಗಳಲ್ಲಿ ವೈರಲ್ ಆಗಿದೆ.
ವರ್ಷಾ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಳ್ಳುವ ಮೊದಲು ಸಭೆಯನ್ನುದ್ದೇಶಿಸಿ ನಗುತ್ತಾ ಮಾತನಾಡುತ್ತಿರುವುದು ಕಂಡು ಬಂದಿದೆ. ಮಾತಿನ ಮಧ್ಯೆ ಪ್ರಜ್ಞೆ ತಪ್ಪಿ ಬಿದ್ದ ವರ್ಶಾ ಅವರನ್ನು ಪರಂದದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಆಕೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಪ್ರಾಥಮಿಕ ಮಾಹಿತಿಯ ಪ್ರಕಾರ, ವರ್ಶಾ ಈ ಮೊದಲು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆ ಬಳಿಕ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಕಂಡು ಬಂದಿರಲಿಲ್ಲ. ವಿದ್ಯಾರ್ಥಿನಿಯ ಅಕಾಲಿಕ ನಿಧನದ ಬಗ್ಗೆ ಕಾಲೇಜು ಆಡಳಿತ ಮಂಡಳಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.
परंडा : निरोप समारंभात भाषण करताना विद्यार्थिनीला आली चक्कर; दवाखान्यात नेत असतानाच मृत्यू pic.twitter.com/sr2UxJB2vO
— Dharashiv Live (@dhepesm) April 6, 2025







