Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆನ್‌ಲೈನ್‌ನಲ್ಲಿ ಖರೀದಿಸಿದ ಚಾಕೊಲೇಟ್‌...

ಆನ್‌ಲೈನ್‌ನಲ್ಲಿ ಖರೀದಿಸಿದ ಚಾಕೊಲೇಟ್‌ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆ!

ವಾರ್ತಾಭಾರತಿವಾರ್ತಾಭಾರತಿ19 Jun 2024 5:20 PM IST
share
ಆನ್‌ಲೈನ್‌ನಲ್ಲಿ ಖರೀದಿಸಿದ ಚಾಕೊಲೇಟ್‌ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆ!

ಹೊಸದಿಲ್ಲಿ: ಆನ್‌ಲೈನ್‌ ಮೂಲಕ ಆರ್ಡರ್‌ ಮಾಡಿದ ಐಸ್‌ಕ್ರೀಂನಲ್ಲಿ ಮಾನವ ಬೆರಳಿನ ತುಂಡು ಪತ್ತೆಯಾದ ಘಟನೆ ಬೆನ್ನಲ್ಲೇ ಇದೀಗ ಚಾಕೊಲೇಟ್‌ ಸಿರಪ್‌ನಲ್ಲಿ ಸತ್ತ ಇಲಿ ಪತ್ತೆಯಾಗಿದೆ.

ಆನ್‌ಲೈನ್‌ ಆ್ಯಪ್‌ Zeptoದಲ್ಲಿ ಆರ್ಡರ್‌ ಮಾಡಿದ್ದ Hershey’s ಚಾಕೊಲೇಟ್‌ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿಯೊಂದು ಪತ್ತೆಯಾಗಿದೆ ಎಂದು ಕುಟುಂಬವೊಂದು ಆರೋಪಿಸಿದೆ.

ಸತ್ತ ಇಲಿ ಇದ್ದ ಸಿರಪ್‌ ಕುಡಿದಿದ್ದ ಮೂವರು ಕುಟುಂಬ ಸದಸ್ಯರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪ್ರಮಿ ಶ್ರೀಧರ್ ಎಂಬವರು ಆರೋಪಿಸಿದ್ದಾರೆ. ಈ ಕುರಿತು ಇನ್‌ಸ್ಟಾಗ್ರಾಮ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು, "ಕೇಕ್‌ನೊಂದಿಗೆ ತಿನ್ನಲು Zeptoದಲ್ಲಿ Hershey’s ಚಾಕೊಲೇಟ್‌ ಸಿರಪ್‌ ಆರ್ಡರ್‌ ಮಾಡಿ ತರಿಸಿದ್ದೆವು. ಬಾಟಲ್‌ ತೆರೆದಾಗ ಆರಂಭದಲ್ಲಿ ದಪ್ಪನೆ ರೀತಿಯಲ್ಲಿ ಸಿರಪ್‌ ಕಂಡುಬಂದಿತ್ತು. ಅದರ ಜತೆಗೆ ಸಣ್ಣ ಸಣ್ಣ ಕೂದಲುಗಳು ಕೂಡ ಇದ್ದವು. ಅನುಮಾನದಿಂದ ಬಾಟಲಿಯಲ್ಲಿರುವ ಚಾಕೊಲೇಟ್‌ ಸಿರಪ್‌ ಅನ್ನು ಪೂರ್ತಿಯಾಗಿ ಪಾತ್ರೆಗೆ ಹಾಕಿ ನೋಡಿದಾಗ ಸತ್ತ ಇಲಿ ಮರಿ ಪತ್ತೆಯಾಗಿದೆ. ಈ ಬಗ್ಗೆ ದೂರು ನೀಡಿದರೂ ಕಂಪನಿ ಕಡೆಯಿಂದ ಯಾವುದೇ ಉತ್ತರವಿಲ್ಲ. ದಯವಿಟ್ಟು ಆರ್ಡರ್‌ ಮಾಡಿ ತಿನ್ನುವ ಆಹಾರದ ಬಗ್ಗೆ ಎಚ್ಚರಿಕೆಯಿರಲಿ" ಎಂದು ಬರೆದುಕೊಂಡಿದ್ದಾರೆ.

ಪ್ರಮಿ ಶ್ರೀಧರ್ ಅವರ ಪೋಸ್ಟ್‌ಗೆ ಪ್ರತಿಕ್ರಯಿಸಿರುವ Hershey’s ಕಂಪನಿಯು, ‘ಈ ಬಗ್ಗೆ ಕ್ಷಮೆಯಾಚಿಸುತ್ತೇವೆ. ನೀವು ಖರೀದಿಸಿದ ಉತ್ಪನ್ನದ ಬ್ಯಾಚ್‌ ಸಂಖ್ಯೆಯನ್ನು ಕಳುಹಿಸಿ. ನಮ್ಮ ತಂಡದ ಸದಸ್ಯರು ನಿಮ್ಮನ್ನು ಸಂಪರ್ಕಿಸುತ್ತಾರೆ’ ಎಂದು ಹೇಳಿದೆ.

View this post on Instagram

A post shared by Prami Sridhar (@pramisridhar)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X