ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ: ಕ್ರಿಕೆಟಿಗ ಯಶ್ ದಯಾಳ್ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಯಶ್ ದಯಾಳ್ (Photo: PTI)
ಜೈಪುರ: ಕ್ರಿಕೆಟಿಗ ಯಶ್ ದಯಾಳ್ ವಿರುದ್ಧ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಜೈಪುರ ಪೊಲೀಸರು ತಿಳಿಸಿದ್ದಾರೆ. ಗಾಝಿಯಾಬಾದ್ನಲ್ಲಿ ಮಹಿಳೆಯೋರ್ವರು ಅತ್ಯಾಚಾರ ಪ್ರಕರಣ ದಾಖಲಿಸಿದ ವಾರಗಳ ನಂತರ ಯಶ್ ದಯಾಳ್ ವಿರುದ್ಧ ಎರಡನೇ ಎಫ್ಐಆರ್ ದಾಖಲಾಗಿದೆ.
ಜುಲೈ 23ರಂದು ಭಾರತೀಯ ನ್ಯಾಯ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿಯಲ್ಲಿ ಯಶ್ ದಯಾಳ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೂರಿನ ಪ್ರಕಾರ, 17 ವರ್ಷದ ಬಾಲಕಿಗೆ ಕ್ರಿಕೆಟ್ ವೃತ್ತಿಜೀವನಕ್ಕೆ ಸಹಾಯ ಮಾಡುವ ಭರವಸೆ ನೀಡಿದ ದಯಾಳ್ ಆಕೆಯನ್ನು ಜೈಪುರದ ಸೀತಾಪುರದಲ್ಲಿರುವ ಹೋಟೆಲ್ಗೆ ಕರೆದೊಯ್ದು ಮೊದಲು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆ ಬಳಿಕ ಎರಡು ವರ್ಷಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
Next Story





