ರಾಜ್ಯಸಭಾ ಸ್ಥಾನಕ್ಕೆ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ವಿಜಯಸಾಯಿ ರೆಡ್ಡಿ ರಾಜೀನಾಮೆ

ವಿಜಯಸಾಯಿ ರೆಡ್ಡಿ (PTI)
ಹೊಸದಿಲ್ಲಿ: ವೈಯಕ್ತಿಕ ಕಾರಣಗಳನ್ನು ನೀಡಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ವಿಜಯಸಾಯಿ ರೆಡ್ಡಿ ಶನಿವಾರ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ, ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು.
ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ನನ್ನ ರಾಜೀನಾಮೆ ಪತ್ರವನ್ನು ರಾಜ್ಯಸಭಾ ಸಭಾಪತಿ ಅವರಿಗೆ ಸಲ್ಲಿಸಿದ್ದು, ಅವರು ಅದನ್ನು ಅಂಗೀಕರಿಸಿದ್ದಾರೆ” ಎಂದು ಹೇಳಿದರು.
“ನಾನು ಯಾವುದೇ ರಾಜಕೀಯ ಪಕ್ಷವನ್ನು ಸೇರುತ್ತಿಲ್ಲ. ಯಾವುದೇ ಹುದ್ದೆ, ಲಾಭ ಅಥವಾ ಹಣದ ಆಸೆಗಾಗಿ ಈ ನಿರ್ಧಾರ ತೆಗೆದುಕೊಂಡಿಲ್ಲ. ಇದು ಸಂಪೂರ್ಣವಾಗಿ ನನ್ನ ವೈಯಕ್ತಿಕ ನಿರ್ಧಾರವಾಗಿದ್ದು, ಯಾವುದೇ ಒತ್ತಡ ಅಥವಾ ಬೆದರಿಕೆಗೆ ಒಳಗಾಗಿಲ್ಲ” ಎಂದೂ ಅವರು ತಿಳಿಸಿದರು.
ಇದಕ್ಕೂ ಮುನ್ನ, ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿ ಶುಕ್ರವಾರ ವಿಜಯಸಾಯಿ ರೆಡ್ಡಿ ಘೋಷಿಸಿದ್ದರು.
Next Story





