×
Ad

ಬಂಟ್ವಾಳ | ಅಮ್ಟಾಡಿಯ ರುದ್ರಭೂಮಿಯಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು

Update: 2025-08-12 12:43 IST

ಬಂಟ್ವಾಳ: ತಾಲೂಕಿನ ಅಮ್ಟಾಡಿ ಗ್ರಾಮ ಪಂಚಾಯತ್ ಗೆ ಸೇರಿದ ರುದ್ರಭೂಮಿಯಿಂದ ಕಳ್ಳರು ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಆ.11ರಂದು ಬೆಳಕಿಗೆ ಬಂದಿದೆ.

ಅಮ್ಟಾಡಿ ಗ್ರಾಮದ ದೇವಿನಗರದಲ್ಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಹೆಣ ಸುಡುವ ಸಿಲಿಕಾನ್ ಚೇಂಬರ್, ಹಿತ್ತಾಳೆಯ ನೀರಿನ ನಳ್ಳಿ, ಕಬ್ಬಿಣದ ಏಣಿ, ಕಬ್ಬಿಣದ ಗೇಟ್ ಹಾಗೂ ಇನ್ನಿತರ ಸುಮಾರು 4 ಲಕ್ಷ ರೂ. ಮೌಲ್ಯದ ಸೊತ್ತುಗಳು ಕಳವಾಗಿದೆ ಎಂದು ತಿಳಿದುಬಂದಿದೆ.

ಅಗಸ್ಟ್ 11ರಂದು ಸ್ಥಳೀಯ ನಿವಾಸಿಯೊಬ್ಬರು ಮೃತಪಟ್ಟಾಗ ಮೃತದೇಹದ ದಹನ ಮಾಡಲು ರುದ್ರಭೂಮಿಗೆ ತೆರಳಿದಾಗ ಕಳವಾಗಿರುವುದು ಬೆಳಕಿಗೆ ಬಂದಿದೆ.

ಕಳ್ಳತನ ಪ್ರಕರಣದ ಕುರಿತು ಅಮ್ಟಾಡಿ ಗ್ರಾಮ ಪಂಚಾಯತ್ ನಿಂದ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಲಾಗುವುದು ಎಂದು ಗ್ರಾಪಂ ಅಧ್ಯಕ್ಷ ವಿಜಯ್ ಕುಮಾರ್ ತಿಳಿಸಿದ್ದಾರೆ.


 



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News