×
Ad

ಮದುವೆ ಹಾಲ್‌ನಲ್ಲಿ ಚಿನ್ನಾಭರಣ ಕಳವು: ಪ್ರಕರಣ ದಾಖಲು

Update: 2025-08-18 21:05 IST

ಮಂಗಳೂರು, ಆ.18: ನಗರದ ಜಪ್ಪಿನಮೊಗರುವಿನ ಹಾಲ್‌ವೊಂದರಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮದಲ್ಲಿ ಮಗುವಿನ ಚಿನ್ನಾಭರಣ ಕಳವುಗೈದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾನು ತನ್ನ ಕುಟುಂಬದ ಜತೆ ಜಪ್ಪಿನಮೊಗರುವಿನ ಸಭಾಂಗಣದಲ್ಲಿ ನಡೆಯುತ್ತಿದ್ದ ಮದುವೆಗೆ ತೆರಳಿದ್ದೆ. ಈ ಸಂದರ್ಭ ಮೂರು ವರ್ಷದ ಮಗುವಿನ ಕುತ್ತಿಗೆಯಲ್ಲಿ 50 ಸಾವಿರ ರೂ.ಮೌಲ್ಯದ 6 ಗ್ರಾಂ ತೂಕದ ಚಿನ್ನವನ್ನು ಯಾರೋ ಕಳವು ಮಾಡಿದ್ದಾರೆ. ಮಧ್ಯಾಹ್ನ 1:30ರಿಂದ 2ರ ಅವಧಿಯಲ್ಲೇ ಕಳವು ಮಾಡಲಾಗಿದೆ ಎಂದು ಮುಹಮ್ಮದ್ ಸುಹೈಲ್ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News