×
Ad

ಕೋಟೆಕಾರ್: ಖೋಖೋ, ತ್ರೋಬಾಲ್ ಪಂದ್ಯ ಉದ್ಘಾಟನೆ

Update: 2025-08-23 18:45 IST

ಉಳ್ಳಾಲ: ದ.ಕ.ಜಿಪಂ, ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕೋಟೆಕಾರ್ ಅಜ್ಜಿನಡ್ಕ ಮರ್ಕಝುಲ್ ಹಿದಾಯ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಶನಿವಾರ ಮರ್ಕಝುಲ್ ಹಿದಾಯ ಶಾಲಾ ಕ್ರೀಡಾಂಗಣದಲ್ಲಿ ಉಳ್ಳಾಲ ಹೋಬಳಿ ಮಟ್ಟದ 14 ಮತ್ತು 17 ವಯೋಮಾನದ ಬಾಲಕ-ಬಾಲಕಿಯರ ಖೋಖೋ ಹಾಗೂ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು.

ಮಂಗಳೂರು ದಕ್ಷಿಣ ವಲಯದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಿಲ್ಲಿ ಪಾಯ್ಸ್ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿದರು. ಮರ್ಕಝುಲ್ ಹಿದಾಯ ಶಾಲೆಯ ಅಧ್ಯಕ್ಷ ಕೆ.ಎಂ. ಅಬ್ದುಲ್ಲಾ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಕೆ.ಎಂ.ರಹೀಂ, ಕಾರ್ಯದರ್ಶಿ ಯು.ಎಚ್.ಫಾರೂಕ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ತ್ಯಾಗಂ ಹರೇಕಳ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷೆ ಜಯವಂತಿ ಸೋನ್ಸ್, ಉಳ್ಳಾಲ್ ಹೋಬಳಿ ನೋಡೆಲ್ ಶಿಕ್ಷಕ ರಾಜೀವ ನಾಯಕ್, ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಹಮೀದ್, ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರಾದ ರಾಧಾಕೃಷ್ಣ ರೈ, ಪುರುಷೋತ್ತಮ ಉಪಸ್ಥಿತರಿದ್ದರು.

ಶಾಲಾ ಸಂಚಾಲಕ ಎನ್.ಎಸ್.ಉಮರಬ್ಬ ಸ್ವಾಗತಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಮುಮ್ತಾಝ್ ಶೇಖ್ ವಂದಿಸಿದರು. ಶಿಕ್ಷಕ ಮೋಹನ್ ಶಿರ್ಲಾಲ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News