×
Ad

ಪುತ್ತೂರು: ಜಲಮೂಲಗಳಿಗೆ ಬಣ್ಣ ಲೇಪಿತ ವಿಗ್ರಹಗಳ ವಿಸರ್ಜನೆ ನಿಷೇಧ

Update: 2025-08-25 21:56 IST

ಮಂಗಳೂರು, ಆ.25 : ಪ್ರತಿ ವಷರ್ದಂತೆ ಈ ಬಾರಿಯೂ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದಾಗಿ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯಿನಿಕ ಗುಣ ಮಟ್ಟವು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ ಪಕ್ಷಿ ಹಾಗೂ ಇತರೇ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅಲ್ಲದೇ ಇಂತಹ ಕಲುಷಿತ ನೀರಿನಿಂದ ಸಾರ್ವಜನಿಕ ಆರೋಗ್ಯಕ್ಕೂ ಧಕ್ಕೆ ಉಂಟಾಗುತ್ತದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಹಬ್ಬದ ಆಚರಣೆಯಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಧಿಸೂಚನೆಯನ್ನು ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರೀಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ, ಬಾವಿ, ಕಟ್ಟೆ ಮತ್ತು ಇತರ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.

ಪ್ಲಾಸ್ಟರ್ ಆಫ್‌ಪ್ಯಾರೀಸ್ ಮತ್ತು ಬಣ್ಣಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದುಹಾಗೂ ಕರ್ನಾಟಕ ರಾಜ್ಯಮಾಲಿನ್ಯನಿಯಂತ್ರಣ ಮಂಡಳಿಯ ಜಲಮಾಲಿನ್ಯ (ನಿವಾರಣಾಮತ್ತುನಿಯಂತ್ರಣಾ)ಕಾಯ್ದೆಯನ್ವಯ ರಾಜ್ಯದ ಯಾವುದೇ ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್‌ಪ್ಯಾರೀಸ್‌ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಐ. ಪಿ. ಸಿಸೆಕ್ಷನ್ 1860ರ ಪ್ರಕಾರ ಕ್ರಮ ತೆಗೆದುಕೊಳ್ಳಲಾ ಗುತ್ತದೆ. ಗೌರಿ ಗಣೇಶ ಹಬ್ಬ ಸಂದರ್ಭಗಳಲ್ಲಿ ಬಣ್ಣ ರಹಿತ ಮಣ್ಣಿನ/ ನೈಸರ್ಗಿ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ, ತದನಂತರ ಗೌರಿ ಗಣೇಶಮೂರ್ತಿಗಳನ್ನು ಪುತ್ತೂರು ನಗರಸಭೆಯಿಂದ ನಿಗದಿಪಡಿಸಿರುವ ಸ್ಥಳಗಳಲ್ಲಿ ಮಾತ್ರವೇ ವಿಗ್ರಹಗಳನು ್ನವಿಸರ್ಜಿಸಬೇಕು.

ಗೌರಿ ಗಣೇಶಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು ಬಾಳೆಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕವಸ್ತುಗಳು) ಪ್ರತ್ಯೇಕಿಸಿಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ, ಪುತ್ತೂರು ನಗರಸಭೆಯ ಕಸ ಸಂಗ್ರಹಣ ವಾಹನಕ್ಕೆ ನೀಡಬೇಕು.ಸಾರ್ವಜನಿಕವಾಗಿ ನಡೆಸುವ ಗಣೇಶಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿವಸ್ತುಗಳನ್ನೇ ಬಳಸಿ ನಿಷೇಧಿತ ಪ್ಲಾಸ್ಟಿಕ್‌ವಸ್ತುಗಳ ಬಳಕೆಮಾಡಬಾರದು.ರಾಜ್ಯದಲ್ಲಿ ನಿಷೇಧಿ ಸಲಾದ ಏಕಬಳಕೆ ಪ್ಲಾಸ್ಟಿಕ್‌ವಸ್ತುಗಳನ್ನು ಯಾವುದೇ ಕಾರಣಕ್ಕೂ ಬಳಸದೇ ಇರುವುದು ಮತ್ತು ಬಳಸಿದಲ್ಲಿ ಸೂಕ್ತ ದಂಡವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ವಿಧಿಸಲಾಗುತ್ತದೆ ಎಂದು ಪುತ್ತೂರು ನಗರಸಭೆ ಪೌರಾಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News