×
Ad

ದ.ಕ.ಜಿಲ್ಲಾ ಮಟ್ಟದ ಬಂಟ ಕ್ರೀಡೋತ್ಸವ: ಸುರತ್ಕಲ್ ಮಹಿಳಾ ತಂಡಕ್ಕೆ ಹಗ್ಗ ಜಗ್ಗಾಟ, ತ್ರೋಬಾಲ್ ಪಂದ್ಯಾಟದಲ್ಲಿ ರನ್ನರ್ಸ್ ಅಪ್ ಪ್ರಶಸ್ತಿ

Update: 2025-08-30 18:50 IST

ಮಂಗಳೂರು : ಬಂಟರ ಯಾನೆ ನಾಡವರ ಮಾತೃಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ನಡೆದ ಅಂತರ್ ಜಿಲ್ಲಾ ಮಟ್ಟದ ಬಂಟ ಕ್ರೀಡೋತ್ಸವ ಸ್ಫರ್ಧೆಯಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ಸದಸ್ಯರು ಹಗ್ಗ ಜಗ್ಗಾಟ ದ್ವಿತೀಯ ಹಾಗೂ ತ್ರೋಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದರು.

ಬಹುಮಾನ ಸ್ವೀಕಾರ ಸಂದರ್ಭ ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ, ಗಣೇಶ್ ಶೆಟ್ಟಿ, ಸುಂದರ ಶೆಟ್ಟಿ, ರತ್ನಾಕರ ಶೆಟ್ಟಿ, ರವೀಂದ್ರ ನಾಥ ಶೆಟ್ಟಿ, ಉದಯಕುಮಾರ್ ಶೆಟ್ಟಿ, ಜಯಶೀಲ ಅಡ್ಯಂತಾಯ, ವಸಂತ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ, ಸುಬ್ಬಯ್ಯ ರೈ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷೆ, ಮಹಿಳಾ ಕ್ರೀಡಾ ಕಾರ್ಯದರ್ಶಿ ಬಬಿತಾ ಶೆಟ್ಟಿ, ಸಂಘದ ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ ಮಧ್ಯ, ನಿಕಟ ಪೂರ್ವ ಕ್ರೀಡಾ ಕಾರ್ಯದರ್ಶಿ ಶಿಶೀರ್ ಶೆಟ್ಟಿ, ಮಾಜಿ ಕ್ರೀಡಾ ಕಾರ್ಯದರ್ಶಿ ಗುಣಶೇಖರ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News