×
Ad

ಸಾಧಕರ ಸಾಧನೆ ಇತರರಿಗೆ ಪ್ರೇರಣೆಯಾಗಲಿ: ಡಾ. ರಾಜೇಂದ್ರ ಕುಮಾರ್

Update: 2025-09-06 20:53 IST

ಮಂಗಳೂರು: ಸಾಧಕರ ಸಾಧನೆ ಇತರರಿಗೆ ಪ್ರೇರಣೆಯಾಗಲಿ ಎಂದು ಸಮಾರಂಭದ ಅಧ್ಯಕ್ಷತೆವಹಿಸಿದ್ದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಅಧ್ಯಕ್ಷ, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಇಪ್ಕೋ ನವದೆಹಲಿಯ ನಿರ್ದೇಶಕ,ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ., ಬೆಂಗಳೂರು ಇದರ ನಿರ್ದೇಶಕ, ಮೆನೇಜಿಂಗ್ ಟ್ರಸ್ಟಿ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ)ನ ಮ್ಯಾನೇಜಿಂಗ್ ಟ್ರಸ್ಟಿ ಡಾ| ಎಂ. ಎನ್. ರಾಜೇಂದ್ರ ಕುಮಾ‌ರ್ ತಿಳಿಸಿದ್ದಾರೆ.

ಅವರು ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.“ಸಹಕಾರಿ ಪಿತಾಮಹ"ದಿ| ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ 2024-25ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹತ್ತನೇ ತರಗತಿ ಹಾಗೂ ಪದವಿಪೂರ್ವ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆಗೈದವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆಪ್ರತಿಭಾ ಪುರಸ್ಕಾರ ಮತ್ತು ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಈ ಸಮಾರಂಭದ ಮೂಲಕ ಸಾಧಕರ ಪರಿಶ್ರಮ ಇತರರಿಗೆ ಗೊತ್ತಾಗಬೇಕು. ಪುರಸ್ಕಾರ ಪಡೆದವರು ಇನ್ನೂ ಉನ್ನತ ಮಟ್ಟಕ್ಕೆ ಏರಿ ಸಾಧನೆ ಮಾಡಿ ಸಮಾಜದಲ್ಲಿ ಇತರರಿಗೆ ಸಹಾಯ ಮಾಡುವಂತಾಗಬೇಕು ಎಂದರು.

ಸಮಾರಂಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ್ ಭಂಡಾರಿ ಪುರಸ್ಕರಿಸಿ ಮಾತನಾಡುತ್ತಾ, ಆರ್ಥಿಕವಾಗಿ ಹಿಂದುಳಿದ ವರ್ಗದ ಪ್ರತಿಭಾನ್ವಿತರನ್ನು ಗುರುತಿಸಿ ಪುರಸ್ಕರಿ ಸುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪ್ರಗತಿಯೊಂದಿಗೆ ತಾಂತ್ರಿಕ ಕೌಶಲಗಳನ್ನು ಮೈ ಗೂಡಿಸಿಕೊಳ್ಳುವ ಅಗತ್ಯವಿದೆ ರಾಷ್ಟ್ರ,ರಾಜ್ಯ ಮಟ್ಟದ ಸಾಧನೆ ಮಾಡಿದ ಸಾಧಕರು ಅವರ ಸಾಧನೆಯ ಹಾದಿ ನಮಗೆ ಮಾದರಿ ಯಾಗಬೇಕು ಎಂದರು.

ಸಮಾರಂಭದ ಅಧ್ಯಕ್ಷತೆವಹಿಸಿದ್ದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಅಧ್ಯಕ್ಷ, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಇಪ್ಕೋ ನವದೆಹಲಿಯ ನಿರ್ದೇಶಕ,ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ., ಬೆಂಗಳೂರು ಇದರ ನಿರ್ದೇಶಕ, ಮೆನೇಜಿಂಗ್ ಟ್ರಸ್ಟಿ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ)ನ ಮ್ಯಾನೇಜಿಂಗ್ ಟ್ರಸ್ಟಿ ಡಾ| ಎಂ. ಎನ್. ರಾಜೇಂದ್ರ ಕುಮಾ‌ರ್ ಸಮಾರಂಭದ ಅಧ್ಯಕ್ಷತೆವಹಿಸಿ ಸನ್ಮಾನಿತರಿಗೆ ಶುಭ ಹಾರೈಸುತ್ತಾ,ಈ ಸಮಾರಂಭದ ಮೂಲಕ ಸಾಧಕರ ಪರಿಶ್ರಮ ಇತರರಿಗೆ ಗೊತ್ತಾಗಬೇಕು. ಪುರಸ್ಕಾರ ಪಡೆದವರು ಇನ್ನೂ ಉನ್ನತ ಮಟ್ಟಕ್ಕೆ ಏರಿ ಸಾಧನೆ ಮಾಡಿ ಸಮಾಜದಲ್ಲಿ ಭವಿಷ್ಯದಲ್ಲಿ ಇತರರಿಗೆ ಸಹಾಯ ಮಾಡುವಂತಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೈದನೃತ್ಯ ವಿದುಷಿ ದೀಕ್ಷಾ ವಿ ಉಡುಪಿ ಯವರಿಗೆ ಗೌರವ ಪುರಸ್ಕಾರ ನೀಡಲಾಯಿತು. ರೆಮೋನಾ ಇವೆಟ್ ಪಿರೇರಾ ಅವರಿಗೆ ಗೌರವ ಪುರಸ್ಕಾರ ಪ್ರಕಟಿಸಲಾಯಿತು.

ಸಮಾರಂಭದಲ್ಲಿ ಉಪಸ್ಥಿತರು ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್. ಕೋಟ್ಯಾನ್, ಎಂ. ವಾದಿರಾಜ ಶೆಟ್ಟಿ, ಶಶಿಕುಮಾ‌ರ್ ರೈ ಬಿ., ದೇವಿಪ್ರಸಾದ್ ಶೆಟ್ಟಿ, ಎಸ್. ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಎಂ. ಮಹೇಶ್ ಹೆಗ್ಡೆ, ಬಿ,. ಕೆ.ಜೈರಾಜ್ ಬಿ.ರೈ, ಎಸ್.ಎನ್. ಮನ್ಮಥ, ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಸ್ಕ್ಯಾಡ್ಸ್ ಅಧ್ಯಕ್ಷರಾದ ರವೀಂದ್ರ ಕಂಬಳಿ,ತನುಶ್ರೀ ಪಿತ್ರೋಡಿ ಯೋಗ ಕಾರ್ಯಕ್ರಮ ನೀಡಿದರು.ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭಾರ) ಗೋಪಾಲಕೃಷ್ಣ ಭಟ್ ಕೆ ಸ್ವಾಗತಿಸಿದರು. ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು.ಡಿಜಿಎಂ ನಿತ್ಯಾನಂದ ಶೇರಿಗಾರ್ ವಂದಿಸಿದರು.




 





 




Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News