×
Ad

ಅರಣ್ಯ ಸಂರಕ್ಷಣೆ ಸಾಮೂಹಿಕ ಹೊಣೆಗಾರಿಕೆ: ನ್ಯಾ. ಬಸವರಾಜ

ರಾಷ್ಟ್ರೀಯ ಅರಣ್ಯ ಹುತಾತ್ಮ ದಿನಾಚರಣೆ

Update: 2025-09-11 21:53 IST

ಮಂಗಳೂರು: ಅರಣ್ಯ ಸಂರಕ್ಷಣೆ ಸಾಮೂಹಿಕ ಹೊಣೆಗಾರಿಕೆಯಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ ತಿಳಿಸಿದ್ದಾರೆ.

ಅರಣ್ಯ ಇಲಾಖೆ ಮಂಗಳೂರು ವೃತ್ತ ಮಂಗಳೂರು ವಿಭಾಗದ ವತಿಯಿಂದ ಅರಣ್ಯ ಭವನದಲ್ಲಿ ಗುರುವಾರ ಹಮ್ಮಿ ಕೊಂಡ ರಾಷ್ಟ್ರೀಯ ಅರಣ್ಯಹುತಾತ್ಮ ದಿನಾಚರಣೆ ಯನ್ನುದ್ದೇಶಿಸಿ ಮಾತನಾಡುತ್ತಾ, ಅರಣ್ಯ ರಕ್ಷಣೆಯಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಇದೆ. ಕಾಡು ಪ್ರಾಣಿಗಳು ನಾಡಿಗೆ ದಾಳಿ ನಡೆಸು ತ್ತಿರುವ ಸಂದರ್ಭದಲ್ಲಿ ಅವುಗಳ ರಕ್ಷಣೆ ಗಾಗಿ ಮತ್ತು ಮನುಷ್ಯರ ಬದುಕಿಗೆ ಅತ್ಯಂತ ಅಗತ್ಯವಾದ ಮರಗಿಡಗಳನ್ನೊಳಗೊಂಡ ಕಾಡಿನ ರಕ್ಷಣೆ ಮಹತ್ವ ಪಡೆದಿದೆ.ಅರಣ್ಯ ರಕ್ಷಣೆಗಾಗಿ ಬಲಿದಾನ ಮಾಡಿದ ಅರಣ್ಯ ಇಲಾಖೆಯ ಅಧಿಕಾರಿ ಗಳನ್ನು ಸ್ಮರಣ ಮಾಡಿ,2025 ಸಾಲಿನ 62 ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಸಮಾರಂಭದಲ್ಲಿ ಪಶ್ಚಿಮ ವಲಯ ಐಜಿಪಿ ಅಮೀತ್ ಸಿಂಗ್ , ಡಾ.ವಿ.ಕರಿಕ್ಕಲನ್ ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕಮಲ ಕರಿಕ್ಕಲನ್, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ,ಜಿಲ್ಲಾಧಿಕಾರಿ ದರ್ಶನ್ ಎಚ್.ವಿ,ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ದ.ಕ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂತೋಣಿ ಎಸ್ ಮರಿಯಪ್ಪ, ವ್ಯವಸ್ಥಾಪಕ ನಿರ್ದೇಶಕಿ ಕಮಲ ಕರಿಕಲನ್ ಮೊದಲಾದ ವರು ಉಪಸ್ಥಿತರಿದ್ದರು.

ವಲಯಾರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಸ್ವಾಗತಿಸಿ, ಮಂಜು ನಾಥ್ ವಂದಿಸಿದರು. ಇದೇ ಸಂದರ್ಭದಲ್ಲಿ ಅರಣ್ಯ ಭವನದಲ್ಲಿ ನಿರ್ಮಿಸಲಾದ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ಗುಚ್ಛ ಅರ್ಪಿಸಿ ಗೌರವಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News