×
Ad

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಬೈಕ್ ಜಾಥಾಗೆ ಚಾಲನೆ

Update: 2025-09-14 18:09 IST

ಮಂಗಳೂರು : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಸಂವಿಧಾನದ ಕುರಿತು ಅರಿವು ಮೂಡಿಸಲು ಬೆಂಗಳೂರಿಗೆ ಹೊರಟ ಬೈಕ್ ಜಾಥಾಕ್ಕೆ ರವಿವಾರ ನಗರದ ಕದ್ರಿ ಪಾರ್ಕ್‌ನಲ್ಲಿ ಚಾಲನೆ ನೀಡಲಾಯಿತು.

ರಾಜ್ಯ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಹಸಿರು ನಿಶಾನೆ ತೋರಿಸಿದರು. ಬಳಿಕ ಮಾತನಾಡಿದ ಅವರು ಭಾರತವು ಜಗತ್ತಿನಲ್ಲಿಯೇ ಅತ್ಯಂತ ಬಲಿಷ್ಠ ಸಂವಿಧಾನ ಹೊಂದಿರುವ ರಾಷ್ಟ್ರವಾಗಿದೆ. ಪ್ರತಿಯೊಬ್ಬರಿಗೂ ಹಕ್ಕು ಮತ್ತು ಕರ್ತವ್ಯಗಳನ್ನು ಒದಗಿಸಿದೆ. ನಾಗರಿಕರು ದೇಶದ ಪ್ರಗತಿಗೆ ಸದಾ ತಮ್ಮನ್ನು ಮುಡಿಪಾಗಿಡಬೇಕು ಎಂದರು.

ಈ ಸಂದರ್ಭ ದ.ಕ. ಜಿಪಂ ಉಪ ಕಾರ್ಯದರ್ಶಿ ಜಯಲಕ್ಷ್ಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಹೇಮಲತಾ, ಸಹಾಯಕ ನಿರ್ದೇಶಕ ಸುರೇಶ ಅಡಿಗ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News