×
Ad

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಹಕರಿಸಲು ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಮನವಿ

ದ.ಕ. ಜಿಲ್ಲಾ ಸಮೀಕ್ಷೆ ಕಾರ್ಯದ ಪೂರ್ವಸಿದ್ಧತಾ ಸಭೆ

Update: 2025-09-15 21:37 IST

ಮಂಗಳೂರು, ಸೆ.15: ರಾಜ್ಯ ಹಿಂದುಳಿದ ವರ್ಗದ ಆಯೋಗವು ನಡೆಸುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಯಲ್ಲಿ ಸಮಾಜದ ಎಲ್ಲಾ ವರ್ಗದ ಜನರ ಸಮೀಕ್ಷೆ ಮಾಡಲಾಗುವುದು ಎಂದು ದ.ಕ.ಜಿಲ್ಲಾ ಉಸ್ತುವಾರಿ ಕಾರ್ಯ ದರ್ಶಿ ತುಳಸಿ ಮದ್ದಿನೇನಿ ತಿಳಿಸಿದ್ದಾರೆ.

ದ.ಕ.ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದ ಪೂರ್ವಸಿದ್ಧತೆ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಈ ಸಮೀಕ್ಷೆಯಲ್ಲಿ ಸಮಾಜದ ಎಲ್ಲಾ ಜಾತಿ, ಧರ್ಮ ಮತ್ತು ವರ್ಗಗಳ ಪ್ರತಿಯೊಬ್ಬರ ವಿವರಗಳನ್ನು ಪಡೆಯಲಾಗು ವುದು. ಈಗಾಗಲೇ ಪ್ರತಿ ಮನೆಗೆ ಸ್ಟಿಕ್ಕರ್ ಅಂಟಿಸಲಾಗಿದೆ. ಅದರ ಆಧಾರದ ಮೇಲೆ ಜಿಪಿಎಸ್ ಮಾಹಿತಿಯೊಂದಿಗೆ ಸಮೀಕ್ಷೆ ನಡೆಸಲಾಗುವುದು. ಪ್ರತಿ ಮನೆಗೂ ಗಣತಿದಾರರು ಬಂದು ಮೊಬೈಲ್‌ಆ್ಯಪ್ ಮೂಲಕ ಸಮೀಕ್ಷೆ ನಡೆಸಲಿ ದ್ದಾರೆ ಎಂದು ತುಳಸಿ ಮದ್ದಿನೇನಿ ಹೇಳಿದರು.

ಪ್ರತಿಯೊಬ್ಬರ ಕುಟುಂಬ ಶೈಕ್ಷಣಿಕ, ವೈವಾಹಿಕ ಸ್ಥಾನಮಾನ, ಸರಕಾರದಿಂದ ಪಡೆದ ಸೌಲಭ್ಯಗಳು, ಉದ್ಯೋಗ, ರಾಜಕೀಯ ಪ್ರಾತಿನಿಧ್ಯ ವಿವರ, ಜಮೀನು ವಿವರ, ಕೃಷಿ ಜಾನುವಾರು, ಕುಡಿಯುವ ನೀರು, ನಿವೇಶನ, ಶೌಚಾಲಯ ಮತ್ತಿತರ 60 ಪ್ರಶ್ನೆಗಳೊಂದಿಗೆ ಮಾಹಿತಿ ಪಡೆಯಲಿದ್ದಾರೆ. ಹಾಗಾಗಿ ಇದೊಂದು ಸಮಗ್ರ ಸಮೀಕ್ಷೆಯಾಗಿದೆ. ಜನರು ಹೇಗಿದ್ದಾರೆ ಎಂಬುದರ ಬಗ್ಗೆ ಸರಕಾರಕ್ಕೆ ಸಮಗ್ರ ಮಾಹಿತಿ ತಿಳಿಯಲಿದೆ. ಇದರಿಂದ ದೊರಕುವ ಮಾಹಿ ತಿಯು ಸರಕಾರದ ನೀತಿ ನಿರೂಪಣೆಯಲ್ಲಿ ಹಾಗೂ ವಿವಿಧ ಯೋಜನೆಗಳ ಜಾರಿಗೆ ಸಹಕಾರಿಯಾಲಿದೆ ಎಂದರು.

ಸಮೀಕ್ಷೆಯಲ್ಲಿ ಯಾವುದೇ ವಿವಾದಾತ್ಮಕ ಪ್ರಶ್ನೆಗಳು ಇರುವುದಿಲ್ಲ. ಪ್ರತಿ ಮನೆಯ ಸಮೀಕ್ಷೆಗೆ ಅಂದಾಜು 40 ನಿಮಿಷ ಸಮಯದ ತಗುಲಲಿದೆ. ಪ್ರತಿದಿನ 10 ಮನೆಗಳ ಸಮೀಕ್ಷೆ ನಡೆಸಲಿದ್ದಾರೆ. ಸಮೀಕ್ಷೆಗೆ ಶಿಕ್ಷಕರ ಸಹಿತ ವಿವಿಧ ಸರಕಾರಿ ಇಲಾಖೆಗಳ ಸಿಬ್ಬಂದಿಯನ್ನ್ನು ಬಳಸಲಾಗುವುದು. ಮನೆಗೆ ಸಮೀಕ್ಷೆದಾರರು ಬಂದಾಗ ಸರಿಯಾದ ಮಾಹಿತಿ ನೀಡಿ ಜನರು ಸಹಕರಿಸಬೇಕು ಎಂದು ತುಳಸಿ ಮದ್ದಿನೇನಿ ಮನವಿ ಮಾಡಿದರು.

ಈ ಸಂದರ್ಭ ಇಂಡಿಯಾ ಸ್ಕಿಲ್ ಕಾಂಪಿಟಿಷನ್ 2025 ಕರಪತ್ರವನ್ನು ದ.ಕ.ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಬಿಡುಗಡೆಗೊಳಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಎಚ್.ವಿ. ದರ್ಶನ್, ಜಿಪಂ ಸಿಇಒ ನರ್ವಾಡೆ ನಾಯಕ ಕಾರ್ಬಾರಿ, ಅಪರ ಜಿಲ್ಲಾಧಿಕಾರಿ ರಾಜು ಕೆ., ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News