×
Ad

ರಾಜ್ಯಮಟ್ಟದ ದಸರಾ ಕ್ರೀಡಾಕೂಟ: ಅರ್ಹತೆ ಗಿಟ್ಟಿಸಿದ ದಕ್ಷಿಣ ಕನ್ನಡದ ಬ್ಯಾಡ್ಮಿಂಟನ್ ತಂಡ

Update: 2025-09-15 21:57 IST

ಮಂಗಳೂರು, ಸೆ.15: ಉರ್ವಾದ ಒಳಾಂಗಣ ಕ್ರೀಡಾಂಗಣದಲ್ಲಿ ಸೆ.13ರಂದು ನಡೆದ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ದಕ್ಷಿಣ ಕನ್ನಡದ ಮಹಿಳೆಯರ ತಂಡ ಪ್ರಥಮ ಮತ್ತು ಪುರುಷರ ತಂಡ ದ್ವಿತೀಯ ಸ್ಥಾನ ಗಳಿಸುವ ಮೂಲಕ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಯುವ ಸಬಲೀಕರಣ ,ಜಿಲ್ಲಾ ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ಹಾಗೂ ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಇವುಗಳ ಸಹಭಾಗಿತ್ವಲ್ಲಿ ನಡೆದ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಂಗಳೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ ಸೇರಿದಂತೆ 8 ಜಿಲ್ಲೆಗಳ ವಿಜೇತ ತಂಡಗಳು ಭಾಗವಹಿಸಿದ್ದವು.

ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ದಕ್ಷಿಣ ಕನ್ನಡದ ತಂಡಗಳು ಸೆಪ್ಟೆಂಬರ್ 23 ರಿಂದ 27ರವರೆಗೆ ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಆಡುವ ಅರ್ಹತೆಯನ್ನು ಪಡೆದಿದೆ.

ಫಲಿತಾಂಶ ಮಹಿಳೆಯರ ವಿಭಾಗ :ಪ್ರಥಮ -ದಕ್ಷಿಣ ಕನ್ನಡ, ದ್ವಿತೀಯ : ಕೊಡಗು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News