×
Ad

ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2025-09-16 19:55 IST

ಉಪ್ಪಿನಂಗಡಿ: ಕಳೆದ 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬೆಂಗಳೂರಿನ ಕೆ.ಜಿ. ಹಳ್ಳಿ ಎಂಬಲ್ಲಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬೆಂಗಳೂರಿನ ಶಿವಾಜಿನಗರ ನಿವಾಸಿ ಇಮ್ರಾನ್ ಖಾನ್ (36) ಬಂಧಿತ ಆರೋಪಿ. ಈತ ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ.:140/2013 ಕಲಂ: 354 (ಎ), (ಡಿ) ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ. ಈತನ ಮೇಲೆ ನ್ಯಾಯಾಲಯ ವಾರೆಂಟ್ ಹೊರಡಿಸಿತ್ತು. ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News