ಝುನೈಫ್ ಕೋಲ್ಪೆಗೆ ಭಾವೈಕ್ಯತಾ ಸಾಹಿತ್ಯ ರತ್ನ ಪುರಸ್ಕಾರ
Update: 2025-09-18 19:05 IST
ದೇರಳಕಟ್ಟೆ,ಸೆ.18:ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದ.ಕ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿಯು ಇತ್ತೀಚೆಗೆ ದೇರಳಕಟ್ಟೆಯಲ್ಲಿ ಹಮ್ಮಿಕೊಂಡ ರಾಜ್ಯಮಟ್ಟದ ಚುಟುಕು ಕವಿಗೋಷ್ಠಿಯಲ್ಲಿ ವಿದ್ಯಾರ್ಥಿ ಯುವ ನಾಯಕ ಝುನೈಫ್ ಕೋಲ್ಪೆ ಅವರಿಗೆ ಭಾವೈಕ್ಯತಾ ಸಾಹಿತ್ಯ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಯುವ ಬರಹಗಾರರಾಗಿರುವ ಝುನೈಫ್ ಕೋಲ್ಪೆ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಮಂಗಳೂರು ವಿ.ವಿ.ಯನ್ನು ಪ್ರತಿನಿಧಿಸಿದ್ದಾರೆ. ಬೆಂಗಳೂರಿನ ಡಿಬೇಟ್ ಕ್ಲಬ್ ಆಯೋಜಿಸಿದ ಯುವಧ್ವನಿ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ, ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿ ನಡೆಸಿದ ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಗಳಿಸಿದ್ದಾರೆ. ಪ್ರಸ್ತುತ ಕನ್ನಡ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.