ಮಂಗಳೂರು: ಮಾನಸಿಕ ಆರೋಗ್ಯ ತರಬೇತಿ ಕಾರ್ಯಕ್ರಮ
ಮಂಗಳೂರು, ಸೆ.19:ದ.ಕ.ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಜಂಟಿ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಗಳಿಗೆ ಮಾನಸಿಕ ಆರೋಗ್ಯ ತರಬೇತಿ ಕಾರ್ಯಕ್ರಮ ಬುಧವಾರ ವೆನ್ಲಾಕ್ ಆಸ್ಪತ್ರೆಯ ಆರ್‌ಎಪಿಸಿಸಿಯಲ್ಲಿ ನಡೆಯಿಯು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋರೋಗ ತಜ್ಞೆ ಡಾ. ಪ್ರಜಾಕ್ತ ರಾವ್, ಲಿಂಕ್ ಡಿ ಎಡಿಕ್ಷನ್ ಸೆಂಟರ್‌ನ ಆಡಳಿತಾಧಿಕಾರಿ ಲಿಡಿಯೋ ಲೋಬೊ, ವಿಚ್ಚೇದನ ಸಮಾಲೋಚಕಿ ಮಾನಸ ಹೆಗ್ಡೆ, ಪದ್ಮಾ, ಸುಷ್ಮಾ, ಫಾದರ್ ಮುಲ್ಲರ್ ಆಸ್ಪತ್ರೆಯ ರೇಡಿಯಾಲಜಿಸ್ಟ್ ಡಾ.ಕೃಷ್ಣಕಿರಣ್ ಎಸ್., ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ದೀಪಾ ಪ್ರಭು ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಎ, ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕೆ. ಕಾರಗಿ ಉಪಸ್ಥಿತರಿದ್ದರು.
ಜಿಲ್ಲಾ ಮಾನಸಿಕ ಕಾರ್ಯಕ್ರಮದ ಅನುಷ್ಠಾನಾಧಿಕಾರಿಡಾ.ಸುದರ್ಶನ್ ಸಿಎಂ ಸ್ವಾಗತಿಸಿದರು. ಜಿಲ್ಲಾ ನಿರೂಪಣಾಧಿ ಕಾರಿ ರಶ್ಮಿ ಕೆ.ಎಂ. ವಂದಿಸಿದರು.