×
Ad

ಡಾ. ಎಂ. ಮೋಹನ ಆಳ್ವರಿಗೆ 'ಕೀರಿಕ್ಕಾಡು ಪ್ರಶಸ್ತಿ'

Update: 2025-09-20 22:16 IST

ದೇಲಂಪಾಡಿ ಬನಾರಿಯ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರ ಮತ್ತು ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ವತಿಯಿಂದ ಕವಿ, ಅರ್ಥದಾರಿ, ಯಕ್ಷಗಾನ ಗುರುಕುಲದ ರುವಾರಿ ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ಟರ ಹೆಸರಿನಲ್ಲಿ ಪ್ರತಿವರ್ಷವೂ ನೀಡಲಾಗುತ್ತಿರುವ ಪ್ರತಿಷ್ಠಿತ "ಕೀರಿಕ್ಕಾಡು ಪ್ರಶಸ್ತಿ"ಯನ್ನು ಈ ಬಾರಿ ಶಿಕ್ಷಣ ಕ್ಷೇತ್ರದ ಮಹಾನ್ ಸಾಧಕ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಕ್ಷೇತ್ರಗಳ ನೇತಾರ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ ಆಳ್ವರಿಗೆ ನೀಡಲಾಗುವುದು.

ಅ. 25ರಂದು ಬನಾರಿ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ನಡೆಯಲಿರುವ ದೇಲಂಪಾಡಿಯ ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಸಂಘದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿ ಯನ್ನು ನೀಡಿ ಗೌರವಿಸಲಾಗುವುದು ಎಂದು ದೇಲಂಪಾಡಿ ಬನಾರಿ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರ ಮತ್ತು ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಅಧ್ಯಕ್ಷ ಡಾ.ರಮಾನಂದ ಬನಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News