ಕುದ್ರೋಳಿ: ಮಂಗಳೂರು ದಸರಾದ ನವರಾತ್ರಿ ಮಹೋತ್ಸವಕ್ಕೆ ಚಾಲನೆ
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾದ ಅಂಗವಾಗಿ ನವರಾತ್ರಿ ಮಹೋತ್ಸ ವದ ಧಾರ್ಮಿಕ ಕಾರ್ಯಕ್ರಮಗಳಿಗೆ ಕೇಂದ್ರದ ಮಾಜಿ ಸಚಿವ ಹಾಗೂ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ಸೋಮವಾರ ಧಾರ್ಮಿಕ ವಿಧಿಗಳೊಂದಿಗೆ ಚಾಲನೆ ನೀಡಲಾಯಿತು
ಬೆಳಗ್ಗೆ ಗುರು ಪ್ರಾರ್ಥನೆಯೊಂದಿಗೆ ಒಂಬತ್ತು ದಿನಗಳ ಕಾಲ ಆರಾಧನೆಗೊಳ್ಳ ಲಿರುವ ನವದುರ್ಗೆಯರು, ಮಹಾಗಣಪತಿ, ಆದಿಶಕ್ತಿ ಹಾಗೂ ಶ್ರೀ ಶಾರದಾ ಮಾತೆಯ ಪ್ರತಿಷ್ಠಾಪನೆ ನಡೆಯಿತು.
ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ಮಂಗಳೂರು ರಾಮಕೃಷ್ಣ ಮಿಶನ್ ಅಧ್ಯಕ್ಷ ಜಿತಕಾಮಾ ನಂದಜಿ ಮಹಾರಾಜ್ ಹಾಗೂ ಮಂಗಳೂರು ಬ್ರಹ್ಮಕುಮಾರೀಸ್ ಸಂಸ್ಥೆಯ ಮುಖ್ಯಸ್ಥೆ ಬಹ್ಮಕುಮಾರಿ ವಿಶ್ವೇಶ್ವರಿ ಜೀ ರವರು ಮಂಗಳೂರು ದಸರಾದ ನವರಾತ್ರಿ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಮಂಡಳಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಮಾತನಾಡುತ್ತಾ, ಕ್ಷೇತ್ರದಲ್ಲಿ ಪ್ರತಿಷ್ಠಾಪನೆ ಗೊಂಡ ಗಣಪತಿ, ಶಾರದಾ ಮಾತೆ, ಆದಿಶಕ್ತಿ ಯೊಂದಿಗೆ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ, ಸಿದ್ದಿದಾತ್ರಿ, ಮಹಾಕಾಳಿ, ಕಾತ್ಯಾಯಿನಿ, ಸ್ಕಂದಮಾತೆ, ಮಹಾಗೌರಿ ದೇವಿಯರನ್ನು ದರ್ಶನಕ್ಕಾಗಿ ದೇಶ ವಿದೇಶದ ಭಕ್ತರು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಎಲ್ಲ ಗಣ್ಯರ ಸಮ್ಮುಖದಲ್ಲಿ ನವರಾತ್ರಿ ಉತ್ಸವದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರ ಮಗಳಿಗೆ ಚಾಲನೆ ದೊರಕಿದೆ. ಈ ಬಾರಿ ಸಾವಿರಾರು ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದು, ಮುುದ್ದು ಶಾರದೆ ಸ್ಪರ್ಧೆ, ನವದುರ್ಗೆಯರ ವೇಷ ಸ್ಪರ್ಧೆ, ದೇಹದಾಡ್ಯ ಸ್ಪರ್ಧೆ, ದಸರಾ ಮ್ಯಾರಾಥನ್, ಮಕ್ಕಳ ದಸರಾ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿವೆ. ಮಂಗಳೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಈ ಬಾರಿ ದೇಶ ವಿದೇಶಗಳಿಂದ ಸಾಕಷ್ಟು ಭಕ್ತರು ಆಗಮಿಸುವ ನಿರೀಕ್ಷೆ ಇದೆ ಎಂದರು.
ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ವೈದಿಕ ಪರಂಪರೆ, ಧಾರ್ಮಿಕ ಶ್ರದ್ಧೆ, ಸಂಸ್ಕೃತಿಯ ಸಂಭ್ರಮ, ಸಂಗೀತದ ಸಪ್ತಸ್ವರ, ಕಲೆ, ಸಾಹಿತ್ಯ, ಕ್ರೀಡಾ ಸಾಧನೆಗಳ ಸಮನ್ವಯ ನವದುರ್ಗೆಯ ಆರಾಧನೆಯ ಮಂಗಳೂರು ದಸರಾ ವಿಶೇಷತೆ ಯಾಗಿದೆ, ನವದುರ್ಗೆಯರ ಪ್ರತಿಷ್ಠಾಪನೆಯ ಸಂಧರ್ಭದಲ್ಲಿ ಹುಲಿ ವೇಷಧಾರಿಗಳತಂಡಗಳ ಪ್ರದರ್ಶನ ನಡೆಯಿತು.
ಈ ಸಂದರ್ಭ ಮಾಜಿ ವಿತ್ತ ಸಚಿವ ಜನಾರ್ದನ ಪೂಜಾರಿ ಪತ್ನಿ ಮಾಲತಿ ಜನಾರ್ಧನ ಪೂಜಾರಿ, ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ್ ಕಾಮತ್, ಉಮಾನಾಥ್ ಕೋಟ್ಯಾನ್ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಉಪಾಧ್ಯಕ್ಷೆ ಉರ್ಮಿಳಾ ರಮೇಶ್, ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಸದಸ್ಯ ಹೆಚ್.ಎಸ್.ಸಾಯಿರಾಂ, ಕ್ಷೇತ್ರಾಭಿವೃದ್ಧಿ ಸಮಿತಿಯ ಚೇರ್ ಮನ್ ದೇವೇಂದ್ರ ಪೂಜಾರಿ,ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ ,ಸಮಿತಿಯ ಸದಸ್ಯ ಹರಿಕೃಷ್ಣ ಬಂಟ್ವಾಳ್, ಲೀಲಾಕ್ಷ ಕರ್ಕೆರಾ, ರಾಜ್ಯ ಹಿಂದುಳಿದ ವರ್ಗದ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ, ಮಾಲತಿ ಜನಾರ್ಧನ ಪೂಜಾರಿ,ಸಂತೋಷ್ ಪೂಜಾರಿ, ಕಿರಣ್ ಕುಮಾರ್ ಕೋಡಿಕಲ್, ದೇವಳದ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.