×
Ad

ಕೆಲಸ ನಿರಾಕರಣೆ: ಹಳೆ ಬಂದರು ಹಮಾಲಿ ಕಾರ್ಮಿಕರಿಂದ ಪ್ರತಿಭಟನೆ

Update: 2025-09-24 19:34 IST

ಮಂಗಳೂರು: ಹಳೆ ಬಂದರು ಸಗಟು ಮಾರುಕಟ್ಟೆಯ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರು ಮಂದಿ ಹಮಾಲಿ ಕಾರ್ಮಿಕರನ್ನು ಸಕಾರಣ ಇಲ್ಲದೆ ಸ್ಥಳೀಯ ಕಾರ್ಮಿಕರಿಗೆ ಕೆಲಸ ನಿರಾಕರಣೆ ಮಾಡಿರುವ ಕ್ರಮವನ್ನು ಖಂಡಿಸಿ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಬುಧವಾರ ಹಳೆ ಬಂದರು ಸಗಟು ಮಾರುಕಟ್ಟೆಯಲ್ಲಿ ಪ್ರತಿಭಟನೆ ನಡೆಯಿತು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ ಉತ್ತರ ಭಾರತೀಯ ಕಾರ್ಮಿಕರನ್ನು ಕಡಿಮೆ ಸಂಬಳಕ್ಕೆ ದುಡಿಸುವ ಉದ್ದೇಶದಿಂದ 40 ವರ್ಷಗಳಿಂದ ಕೆಲಸ ಮಾಡಿದ ಸ್ಥಳೀಯ ಕಾರ್ಮಿಕರಿಗೆ ಕನಿಷ್ಠ ಸೇವಾ ಪರಿಹಾರ ನೀಡದೆ ಅನ್ಯಾಯ ಮಾಡಲಾಗಿದೆ. ಕಾರ್ಮಿಕರಿಗಾಗಿರುವ ಅನ್ಯಾಯವನ್ನು ಸಹಿಸಲು ಸಾಧ್ಯವಿಲ್ಲ. ಕಾರ್ಮಿಕರಿಗೆ ನ್ಯಾಯ ಸಿಗದಿದ್ದಲ್ಲಿ ಸಗಟು ಮಾರುಕಟ್ಟೆಯ ಎಲ್ಲಾ ಹಮಾಲಿ ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಅನನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಸಂಘದ ಅಧ್ಯಕ್ಷ ಬಿ.ಕೆ. ಇಮ್ತಿಯಾಝ್, ಸಂಘದ ಪ್ರಧಾನ ಕಾರ್ಯದರ್ಶಿ ಫಾರೂಕ್ ಉಳ್ಳಾಲಬೈಲ್, ಕೋಶಾಧಿಕಾರಿ ಶಮೀರ್ ಬೋಳಿಯಾರ್, ಪ್ರಮುಖರಾದ ಲೋಕೇಶ್ ಶೆಟ್ಟಿ, ಮಜೀದ್ ಉಳ್ಳಾಲ, ಹರೀಶ್ ಕೆರೆಬೈಲ್, ಮೋಹನ ಕುಂಪಲ, ಪಿ.ಟಿ. ಮುಹಮ್ಮದ್, ಸಿದ್ದೀಕ್ ಬೆಂಗರೆ, ಬಶೀರ್ ಹರೇಕಳ, ಪ್ರಭಾಕರ, ಅನಿಲ್, ಶರಣಪ್ಪ, ಹಂಝ, ಮಾಧವ ಕಾವೂರು ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News