ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಸೂಚನೆ
Update: 2025-09-25 19:46 IST
ಮಂಗಳೂರು: ಭಾರತೀಯ ಹವಾಮಾನ ಇಲಾಖೆಯು ಸೆ.25ರಿಂದ 27ರವರೆಗೆ ಭಾರೀ ಮಳೆ ಗಾಳಿ ಬೀಸುವುದ ರಿಂದ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಹಾಗಾಗಿ ಸಂಭಾವ್ಯ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರ ಸಹಿತ ಯಾರೂ ಕೂಡ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಮೀನುಗಾರಿಕಾ ಜಂಟಿ ನಿರ್ದೇಶಕರು ಸೂಚನೆ ನೀಡಿದ್ದಾರೆ.