ಮಂಗಳೂರು: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ
Mangaluru: Two absconding accused arrested
Update: 2025-09-26 12:33 IST
ಸಾಂದರ್ಭಿಕ ಚಿತ್ರ
ಮಂಗಳೂರು: ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಿವಾಸಿ ಶೇಕ್ ಶಹಬಾಝ್(31) ಹಾಗೂ ಕಸಬಾ ಬೆಂಗ್ರೆ ನಿವಾಸಿ ಮುಹಮ್ಮದ್ ನಿಝಾಮುದ್ದೀನ್(30) ಬಂಧಿತ ಆರೋಪಿಗಳು
ವಾರಂಟ್ ಆರೋಪಿಯಾಗಿರುವ ಶೇಕ್ ಶಹಬಾಝ್ ನನ್ನು ಆಂಧ್ರ ಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ಸುರುಗೂರು ಎಂಬ ಪ್ರದೇಶದಿಂದ ಬರ್ಕೆ ಪೊಲೀಸ್ ಠಾಣೆಯ ಪೊಲೀಸರು ಸೆ.24ರಂದು ರಾತ್ರಿ ಬಂಧಿಸಿದ್ದಾರೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ನಿಝಾಮುದ್ದೀನ್ ನನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಬಂಧಿತರ ವಿರುದ್ಧ ವಿವಿಧ ಠಾಣೆಗಳಲ್ಲಿ ತಲಾ ಆರು ಪ್ರಕರಣಗಳು ದಾಖಲಾಗಿವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.