×
Ad

ಮಂಗಳೂರು ನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಸುರಕ್ಷತಾ ಪಾದರಕ್ಷೆಗಳ ವಿತರಣೆ

Update: 2025-09-29 19:15 IST

ಮಂಗಳೂರು, ಸೆ.29:ನಗರದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೊರೇಶನ್ ವತಿಯಿಂದ ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯ ನಿಟ್ಟಿನಲ್ಲಿ ಉದ್ದೇಶದಿಂದ ಮಂಗಳೂರು ಮಹಾನಗರ ಪಾಲಿಕೆಗೆ 100 ಜೋಡಿ ಸುರಕ್ಷತಾ ಪಾದರಕ್ಷೆಗಳನ್ನು ಸೋಮವಾರ ವಿತರಿಸಲಾಯಿತು.

ಪಾಲಿಕೆ ಆಯುಕ್ತರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಯುಕ್ತ ರವಿಚಂದ್ರ ನಾಯಕ್ ಸಮ್ಮುಖ ರೋಹನ್ ಕಾರ್ಪೊರೇಶನ್‌ನ ಮಾರ್ಕೆಟಿಂಗ್ ಮ್ಯಾನೇಜರ್ ಮಾಕ್ಷಿಮ್ ಲೋಬೊ ಕಾರ್ಮಿಕರಿಗೆ ಪಾದರಕ್ಷೆಗಳನ್ನು ಹಸ್ತಾಂತರಿಸಿದರು.

ಈ ಸಂದರ್ಭ ಮಾತನಾಡಿದ ಮಾಕ್ಷಿಮ್ ಲೋಬೋ ಪೌರ ಕಾರ್ಮಿಕರು ಸಮಾಜದ ಬೆನ್ನೆಲುಬು. ಅವರ ಶ್ರಮ ದಿಂದಲೇ ನಗರ ಸ್ವಚ್ಛವಾಗಿರುತ್ತದೆ. ಅವರ ಸುರಕ್ಷತೆಗಾಗಿ ನಾವು ಕೈಗೊಂಡಿರುವ ಈ ಉಪಕ್ರಮ ಸಂಸ್ಥೆಯ ಸಾಮಾಜಿಕ ಜವಾಬ್ದಾರಿಯ ಭಾಗವಾಗಿದೆ ಎಂದು ಹೇಳಿದರು.

ಆಯುಕ್ತ ರವಿಚಂದ್ರ ನಾಯಕ್ ಮಾತನಾಡಿ ಪೌರ ಕಾರ್ಮಿಕರ ಸುರಕ್ಷತೆಯ ಕಡೆ ಗಮನ ಹರಿಸಿರುವ ರೋಹನ್ ಕಾರ್ಪೊರೇಶನ್‌ನ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News