ಮಿಥುನ್ ರೈ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ
ಮೂಡುಬಿದಿರೆ : ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿ ಬಳಗವು ಬ್ಲಡ್ ಡೋನರ್ಸ್ ಹೆಲ್ಪ್ ಲೈನ್ ಮೂಡುಬಿದಿರೆ ಮತ್ತು ಆಳ್ವಾಸ್ ರೋಟರಿ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಹೆಲ್ತ್ ಕಾರ್ಡ್ ವಿತರಣಾ ಕಾರ್ಯಕ್ರಮವು ಪ್ರೀತಮ್ ಗಾರ್ಡನ್ ಹಾಲ್ ನಲ್ಲಿ ಶನಿವಾರ ನಡೆಯಿತು.
ಶಿಬಿರವನ್ನು ಆಳ್ವಾಸ್ ಹೆಲ್ತ್ ಸೆಂಟರ್ ನ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ್, ಬ್ಲಡ್ ಬ್ಯಾಂಕ್ ನ ಲೀಲಾ ಹಾಗೂ ಬ್ಲಡ್ ಡೋನರ್ಸ್ ಮೂಡುಬಿದಿರೆ ಮುಖ್ಯಸ್ಥ ಕ್ಲಾರಿಯೋ ಡಿಸೋಜ ಅವರು ಉದ್ಘಾಟಿಸಿದರು.
ಆಳ್ವಾಸ್ ಟ್ರಸ್ಟಿ ವಿವೇಕ್ ಆಳ್ವ ಅವರು ಮಾತನಾಡಿ, ಮಿಥುನ್ ರೈ ಅವರು ಕೈಗೊಳ್ಳುತ್ತಿರುವ ಉತ್ತಮ ಕಾರ್ಯಗಳ ಬಗ್ಗೆ ಶ್ಲಾಘಿಸಿದರು.
ಆಳ್ವಾಸ್ ಆಸ್ಪತ್ರೆಯ ಡಾ. ಹನಾ ಅವರು ಮಹಿಳೆಯರಿಗೆ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಮಿಥುನ್ ರೈ ಅವರು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಮಾಹಿತಿ ಮತ್ತು ಆರೋಗ್ಯ ಕಾರ್ಡ್ ವಿತರಿಸಿ ಮಾತನಾಡಿದರು.
ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ್ ಬನಾ೯ಡ್, ಪುರಸಭಾ ಸದಸ್ಯರಾದ ಕೊರಗಪ್ಪ, ಜೊಸ್ಸಿ ಮಿನೇಜಸ್, ಸುರೇಶ್ ಪ್ರಭು, ಪುರಂದರ ದೇವಾಡಿಗ, ಇಕ್ಬಾಲ್ ಕರೀಂ, ಮಹಿಳಾ ಕಾಂಗ್ರೆಸ್ ನ ಮೂಡುಬಿದಿರೆ ತಾಲೂಕು ಅಧ್ಯಕ್ಷೆ ಸುಪ್ರಿಯಾ ಡಿ. ಶೆಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಮುಖಂಡ ರಾಜೇಶ್ ಕಡಲಕೆರೆ ಕಾರ್ಯಕ್ರಮ ನಿರೂಪಿಸಿದರು.