×
Ad

ವಕೀಲ ರಾಜೇಶ್ ಕಿಶೋರ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲು ದಸಂಸ ಆಗ್ರಹ

Update: 2025-10-06 22:12 IST

ಮಂಗಳೂರು, ಅ.6: ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ನ್ಯಾಯಾಲಯದ ಕಲಾಪದ ವೇಳೆ ಹಿರಿಯ ವಕೀಲನೊಬ್ಬ ಶೂ ಎಸೆಯಲು ಯತ್ನಿಸಿರುವ ಸಂವಿಧಾನ ವಿರೋಧಿ ಕೃತ್ಯವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪಬಣದ ದ.ಕ.ಜಿಲ್ಲಾ ಸಮಿತಿಯು ಖಂಡಿಸಿದೆ.

ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ನೀತಿಯನ್ನು ಒಪ್ಪದ ಮನುವಾದಿ ಮನಸ್ಥಿತಿಯ ಸನಾತನ ವೈದಿಕ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡಿರುವ ವಕೀಲ ರಾಜೇಶ್ ಕಿಶೋರ್‌ನನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ ತಕ್ಷಣ ಅಮಾನತುಗೊಳಿಸಬೇಕು. ಈತನ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಮಿತಿಯ ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News