ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
Update: 2025-10-07 18:59 IST
ಮಂಗಳೂರು, ಅ.7: ನಗರದ ಬಂದರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕಸಬ ಬೆಂಗರೆಯ ಅಲ್ತಾಫ್ (47) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ 12 ವರ್ಷದಿಂದ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹಾಗಾಗಿ ನ್ಯಾಯಾಲ ಯವು ಎಲ್‌ಪಿಸಿ ಪ್ರಕರಣವೆಂದು ಪರಿಗಣಿಸಿತ್ತು. ಅದರಂತೆ ಬಂದರ್ ಠಾಣೆಯ ಎಎಸ್ಸೈ ಬಾಬು, ಪೊಲೀಸ್ ಕಾನ್‌ಸ್ಟೇಬಲ್‌ಗಳಾದ ಗುರು ಬಿ.ಟಿ. ಸುನಿಲ್ ಕುಮಾರ್ ಎನ್. ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿ ಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.