×
Ad

ಎನ್‌ಐಪಿಎಂ ನ್ಯಾಶನಲ್ ಬಿಸಿನೆಸ್ ಕ್ವಿಝ್ : ರೋಶನಿ ನಿಲಯ ಕಾಲೇಜಿಗೆ ಚಾಂಪಿಯನ್‌ಶಿಪ್

Update: 2025-10-08 22:07 IST

ಮಂಗಳೂರು: ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್‌ಮೆಂಟ್ (ಎನ್‌ಐಪಿಎಂ)ನ ಮಂಗಳೂರು ಘಟಕ ವತಿಯಿಂದ ನಗರದ ಸ್ವಸ್ತಿಕ್ ನ್ಯಾಷನಲ್ ಬಿಸಿನೆಸ್ ಸ್ಕೂಲ್‌ನಲ್ಲಿ ನಡೆದ ಎನ್‌ಐಪಿಎಂ ನ್ಯಾಶನಲ್ ಬಿಸಿನೆಸ್ ಕ್ವಿಝ್‌ನಲ್ಲಿ ಮಂಗಳೂರಿನ ರೋಶನಿ ನಿಲಯ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳ ತಂಡ ಪ್ರಥಮ ಮತ್ತು ದ್ವಿತೀಯ ಬಹುಮಾನ ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್‌ನ ವಿದ್ಯಾರ್ಥಿಗಳ ತಂಡ ತೃತೀಯ ಬಹುಮಾನ ಪಡೆಯಿತು. ವಿವಿಧ ಶಿಕ್ಷಣ ಸಂಸ್ಥೆಗಳ ಒಟ್ಟು 18 ತಂಡಗಳು ಭಾಗವಹಿಸಿದ್ದವು.

ಮಂಗಳೂರು ಕ್ವಿಜಿಂಗ್ ಫೌಂಡೇಶನ್‌ನ ಡಾ. ಅಣ್ಣಪ್ಪ ಕಾಮತ್ ಮತ್ತು ಡಾ.ವಿಶ್ವಾಸ್ ಪೈ ಇವರು ರಸಪ್ರಶ್ನೆ ಸ್ಪರ್ಧೆ ನಡೆಸಿಕೊಟ್ಟರು.

ಸ್ವಸ್ತಿಕ್ ನ್ಯಾಷನಲ್ ಬಿಸಿನೆಸ್ ಸ್ಕೂಲ್‌ನ ಅಧ್ಯಕ್ಷ ಡಾ. ರಾಘವೇಂದ್ರ ಹೊಳ್ಳ ಅವರು ಕಾರ್ಪೊರೇಟ್ ಜಗತ್ತಿನ ವಿಕಸನಗೊಳ್ಳುತ್ತಿರುವ ಬೇಡಿಕೆಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಶಿಕ್ಷಣ ಸಂಸ್ಥೆಗಳು ಮತ್ತು ಕೈಗಾರಿಕಾ ವೃತ್ತಿಪರರ ನಡುವಿನ ನಿರಂತರ ಸಹಯೋಗದ ಮಹತ್ವದ ಬಗ್ಗೆ ಮಾತನಾಡಿದರು.

ಕಿಝಿಂಗ್ ಫೌಂಡೇಶನ್‌ನ ಕಾರ್ಯಕಾರಿ ಸಮಿತಿ ಸದಸ್ಯರಾದ ಯೋಗೀಶ್ ಕಲಸಡ್ಕ , ಮನೋಜ್ ಕುಮಾರ್ ಉಪಸ್ಥಿತರಿದ್ದರು.

ಎನ್‌ಐಪಿಎಂ ಮಂಗಳೂರು ಘಟಕದ ಅಧ್ಯಕ್ಷ ಪ್ರಭೋದ ಕೆ.ಎಸ್. ಸ್ವಾಗತಿಸಿ, ಜತೆ ಕಾರ್ಯದರ್ಶಿ ನಿತಿನ್.ಎಂ.ಆರ್.ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ದಿವ್ಯಶ್ರೀ ಗಟ್ಟಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News