ಕರಾವಳಿ ಅಭಿವೃದ್ಧಿ ಪ್ರಾಧಿಕಾರ ನಿಗಮದ ಅಧ್ಯಕ್ಷ ಎಂಎ ಗಫೂರ್ ಉಳ್ಳಾಲ ದರ್ಗಾಕ್ಕೆ ಭೇಟಿ
Update: 2025-10-09 00:05 IST
ಉಳ್ಳಾಲ: ಕರ್ನಾಟಕ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ನಿಗಮದ ಅಧ್ಯಕ್ಷ ಎಂ ಎ ಗಫೂರ್ ಬುಧವಾರ ಉಳ್ಳಾಲ ಸಯ್ಯದ್ ಮದನಿ ದರ್ಗಾಕ್ಕೆ ಭೇಟಿ ನೀಡಿದರು.
ಈ ಸಂದರ್ಭ ಅವರನ್ನು ಉಳ್ಳಾಲ ದರ್ಗಾ ಸಮಿತಿಯ ಅಧ್ಯಕ್ಷ ಹನೀಫ್ ಹಾಜಿ ಮತ್ತು ಪದಾಧಿಕಾರಿಗಳು ಬರ ಮಾಡಿ ಕೊಂಡರು. ಬಳಿಕ ಕರಾವಳಿಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಯಾದ ಎಂ ಎ ಗಫೂರ್ ಅವರನ್ನು ಉಳ್ಳಾಲ ಸಯ್ಯದ್ ಮದನಿ ದರ್ಗಾ ಸಮಿತಿ ವತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು.
ಈ ಸಂದರ್ಭ ದರ್ಗಾ ಕೋಶಾಧಿಕಾರಿ ನಾಝಿಮ್ ರಹ್ಮಾನ್, ಮೇಲಂಗಡಿ ಮಸೀದಿಯ ಅಧ್ಯಕ್ಷ ಮುಸ್ತಫಾ ಅಬ್ದುಲ್ಲ, ಪ್ರದೇಶ ಕಾಂಗ್ರೆಸ್ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ವಹಾಬ್ ಕುದ್ರೋಳಿ, ದರ್ಗಾ ಸಮಿತಿ ಸದಸ್ಯರಾದ ಝೈನುದ್ದೀನ್ ಮೇಲಂಗಡಿ, ಅಮೀರ್ ಕಲ್ಲಾಪು, ಮೊಯ್ದಿನ್ ಪಟ್ಲ, ರಫೀಕ್ ಕೋಡಿ, ಸಾಜಿದ್ ಉಳ್ಳಾಲ್, ಅಶ್ರಫ್ ಕೋಡಿ, ರಫೀಕ್ ಮೇಲಂಗಡಿ, ಸೋಶಿಯಲ್ ಫಾರೂಕ್ ಉಪಸ್ಥಿತರಿದ್ದರು.