×
Ad

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ದ.ಕ. ಸಂಸದ ಬ್ರಿಜೇಶ್ ಚೌಟ ಭಾಗಿ: ಭಾರತದ ಸುಸ್ಥಿರ ಅಭಿವೃದ್ಧಿ ಕುರಿತು ವಿಚಾರ ಮಂಡನೆ

Update: 2025-10-09 18:45 IST

ಮಂಗಳೂರು, ಅ.9: ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನಡೆಯುತ್ತಿರುವ 80ನೇ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಯಾಗಿ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಭಾಗಿಯಾಗಿದ್ದಾರೆ.

ವಿಶ್ವ ವೇದಿಕೆಯಲ್ಲಿ ನಮ್ಮ ದೇಶದ ಸುಸ್ಥಿರ ಅಭಿವೃದ್ಧಿಯ ಬಗ್ಗೆ ವಿಷಯ ಮಂಡಿಸಿ ಗಮನ ಸೆಳೆದಿದ್ದಾರೆ.

ಭಾರತದಿಂದ ಸರ್ವ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಪಿಪಿ ಚೌಧರಿ ನೇತೃತ್ವದ ನಿಯೋಗವು ನ್ಯೂಯಾರ್ಕ್‌ ನಲ್ಲಿ ಅ.8ರಿಂದ 14ರವರೆಗೆ ನಡೆಯುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅಧಿವೇಶನದಲ್ಲಿ ಭಾಗವಹಿಸುತ್ತಿದೆ. ಈ ತಂಡದಲ್ಲಿ ಕರ್ನಾಟಕದಿಂದ ಸಂಸದ ಕ್ಯಾ. ಬ್ರಿಜೇಶ್ ಚೌಟ ಭಾಗವಹಿಸುತ್ತಿದ್ದಾರೆ.

ಅಧಿವೇಶನದಲ್ಲಿ ಚೌಟ ಅವರು ‘2030ಕ್ಕೆ ಐದು ವರ್ಷಗಳು-ಸುಸ್ಥಿರ ಅಭಿವೃದ್ಧಿಗಾಗಿ ಬಹುಪಕ್ಷೀಯ ಪರಿಹಾರಗಳು’ ವಿಷಯದ ಬಗ್ಗೆ ಭವಿಷ್ಯ ಭಾರತದ ರಾಷ್ಟ್ರೀಯ ನಿಲುವನ್ನು ಮಂಡಿಸಿದರು.

ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ಬಹುಪಕ್ಷೀಯ ಸಹಕಾರ ಮತ್ತು ಸಂಪನ್ಮೂಲಗಳ ಸ್ಥಿರತೆ ಅತ್ಯಗತ್ಯ. ಅಲ್ಲದೆ, ಭಾರತವು ಅಭಿವೃದ್ಧಿ ಹೊಂದದ ಮತ್ತು ಭೂ-ಆವೃತ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ತನ್ನ ಬೆಂಬಲ ನೀಡುವು ದನ್ನು ಮುಂದುವರಿಸುವುದಾಗಿ ಮತ್ತು ಜಾಗತಿಕ ಸಹಭಾಗಿತ್ವಕ್ಕೆ ದಕ್ಷಿಣ-ದಕ್ಷಿಣ ಸಹಕಾರದ ಮಹತ್ವವನ್ನು ಭಾರತ ಪ್ರತಿಪಾದಿಸುತ್ತಿರುವುದಾಗಿ ಹೇಳಿದರು.

ಚೌಟ ಅವರನ್ನು ಒಳಗೊಂಡಿರುವ ಈ ನಿಯೋಗದಲ್ಲಿ ಸಂಸದರಾಗಿರುವ ಅನಿಲ್ ಬಲೂನಿ, ಡಾ. ನಿಶಿಕಾಂತ್ ದುಬೆ, ಉಜ್ವಲ್ ನಿಕಮ್, ಎಸ್ ಫಾಂಗ್ನಾನ್ ಕೊನ್ಯಾಕ್, ಡಾ. ಮೇಧಾ ವಿಶ್ರಮ್ ಕುಲಕರ್ಣಿ, ಪೂನಂ ಬೆನ್ ಮಾದಮ್, ವಂಶಿ ಕೃಷ್ಣ ಗದ್ದಾಮ್, ವಿವೇಕ್ ತಂಖಾ, ಡಾ. ಟಿ. ಸುಮತಿ, ಎನ್.ಕೆ. ಪ್ರೇಮಚಂದ್ರನ್, ಕುಮಾರಿ ಸೆಲ್ಜಾ, ಮಾತುಕುಮಿಲ್ಲಿ ಶ್ರಿಭರತ್ ಮತ್ತು ರಾಜೀವ್ ರೈ ಅವರು ಕೂಡ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News