×
Ad

ಕಿನ್ಯ: ಬಾವಿಯಲ್ಲಿ ಯುವಕನ ಮೃತದೇಹ ಪತ್ತೆ

Update: 2025-10-09 21:30 IST

ಉಳ್ಳಾಲ: ತೋಟದ ಬಾವಿಯೊಂದರಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿದ ಘಟನೆ ಕಿನ್ಯದಲ್ಲಿ ನಡೆದಿದೆ.

ಕಿನ್ಯ ಗ್ರಾಮದ ಪಾಲ್ತಾಡಿ ನಿವಾಸಿ ಮಿಥುನ್ ಶೆಟ್ಟಿ(32) ಮೃತ ಯುವಕ.

ಮಿಥುನ್ ಅವರು ಕಾಲು ಜಾರಿ ಬಾವಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು , ಸ್ಥಳೀಯರು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.

ಅವಿವಾಹಿತನಾಗಿರುವ ಮಿಥುನ್, ಮಂಗಳೂರಿನ ಬೇಕರಿ ಒಂದರಲ್ಲಿ ಉದ್ಯೋಗದಲ್ಲಿದ್ದರು. ಅವರು ಗುರುವಾರ ಬೆಳಗ್ಗಿನಿಂದ ನಾಪತ್ತೆಯಾಗಿದ್ದರೆನ್ನಲಾಗಿದೆ. ಈ ಸಂದರ್ಭದಲ್ಲಿ ಯುವಕರು ಹುಡುಕಾಡಿದ್ದು ಗುರುವಾರ ಮಧ್ಯಾಹ್ನದ ವೇಳೆ ಮಿಥುನ್ ಅವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಉಳ್ಳಾಲ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಯುಡಿಆರ್ ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News