×
Ad

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Update: 2025-10-09 22:03 IST

ಮಂಗಳೂರು, ಅ.9: ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.

ಕುದ್ರೋಳಿಯ ಸಿನಾನ್(24 ) ಬಂಧಿತ ಆರೋಪಿ.

ಈತನ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ 2021 ರಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿ ಯಾಗಿದ್ದನು. ಆರೋಪಿಯು ನ್ಯಾಯಾಲಯದ ಕಲಾಪಗಳಿಗೆ ಹಾಜರಾಗದೆ ನ್ಯಾಯಾಲಯದ ಜಾಮೀನಿನ ಆದೇಶವನ್ನು ಉಲ್ಲಂಘನೆ ಮಾಡಿದ ಬಗ್ಗೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ಸಿನಾನ್ ಕಳೆದ 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಈತನ ವಿರುದ್ದ ನ್ಯಾಯಾಲಯವು ವಾರೆಂಟ್ ಹೊರಡಿಸಿತ್ತು.

ವಾರೆಂಟ್ ಜ್ಯಾರಿಗೊಳಿಸುವ ಸಲುವಾಗಿ ಈತನ ವಿರುದ್ದ ಹೊಸದಿಲ್ಲಿಯ ಬ್ಯೂರೋ ಆಫ್ ಇಮಿಗ್ರೇಶನ್ ಎಲ್‌ಒಸಿ ತೆರೆಯಲಾಗಿತ್ತು. ಅ. 8ರಂದು ಖತಾರ್ ನಿಂದ ಮಂಗಳೂರಿಗೆ ವಿಮಾನ ಮೂಲಕ ಆಗಮಿಸಿದ ಆರೋಪಿಯನ್ನು ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಶನ್ ಅಧಿಕಾರಿಗಳು ವಶಕ್ಕೆ ಪಡೆದು ಉರ್ವಾ ಪೊಲೀಸ್ ಠಾಣಾ ಅಧಿಕಾರಿಗಳಿಗೆ ಹಸ್ತಾಂತರಿಸಿದರು.

ಆರೋಪಿಯನ್ನು ಬುಧವಾರ ರಾತ್ರಿ ನ್ಯಾಯಾಲಯಕ್ಕೆ ಹಾಜರುಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News