ತಂತ್ರಜ್ಞಾನದಿಂದ ಕನ್ನಡ ಭಾಷೆ ಸೊರಗುತ್ತಿದೆ: ಪ್ರೊ.ವಿವೇಕ ರೈ
ಮಂಗಳೂರು ವಿವಿ ಉಪನ್ಯಾಸ ಮಾಲಿಕೆ ಉದ್ಘಾಟನೆ
ಮಂಗಳೂರು, ಅ.14: ’ತಂತ್ರಜ್ಞಾನದಿಂದ ಕನ್ನಡ ಭಾಷೆ ಸೊರಗುತ್ತಿದೆ, ಹೊಸತಲೆಮಾರಿನ ಕವಿಗಳು ಕಾವ್ಯಗಳಲ್ಲಿ ಶಬ್ದಗಳನ್ನು ಕುಣಿಸುವ ಪ್ರಯತ್ನ ಮಾಡಬೇಕು’ ಎಂದು ಪಂಪ ಪ್ರಶಸ್ತಿ ಪುರಸ್ಕೃತ ಪ್ರೊ.ಬಿ.ಎ ವಿವೇಕ ರೈ ಹೇಳಿದರು.
ಕೊಣಾಜೆ ಮಂಗಳಗಂಗೋತ್ರಿಯ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಭಾಗಿತ್ವದಲ್ಲಿ ನಗರದ ಹಂಪನ ಕಟ್ಟೆಯ ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಸೋಮವಾರ ನಡೆದ ಜನಸಾಮಾನ್ಯರಿಗೆ ಪ್ರಾಚೀನ ಕನ್ನಡ ಸಾಹಿತ್ಯ ಸರಣಿ ಉಪನ್ಯಾಸ ಮಾಲಿಕೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಳಿಕ ವಿವೇಕ ರೈ ಅವರಿಂದ ಪಂಪನ ಕಾವ್ಯಗಳ ಉಪನ್ಯಾಸ ನಡೆಯಿತು. ಈ ಸಂದರ್ಭ ಮಂಗಳೂರು ವಿವಿ ಕುಲಸಚಿವ ಕೆ. ರಾಜು ಮೊಗವೀರ, ಹಣಕಾಸು ಅಧಿಕಾರಿ ಪಂಚಲಿಂಗ ಸ್ವಾಮಿ, ಮಂಗಳೂರು ವಿವಿ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಉಪಸ್ಥಿತರಿದ್ದರು.
ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಪ್ರೊ. ನಾಗಪ್ಪ ಗೌಡ ಸ್ವಾಗತಿಸಿದರು. ಡಾ. ಧನಜಯ ಕುಂಬ್ಳೆ ಕಾರ್ಯಕ್ರಮ ನಿರೂಪಿಸಿದರು ಶ್ರೀರಕ್ಷಾ ಎಸ್.ಎಚ್. ಪೂಜಾರಿ ತಂಡವು ವೀಣಾವಾದನ ನಡೆಸಿಕೊಟ್ಟಿತು.