×
Ad

ವಿಶೇಷ ಚೇತನ ಮಕ್ಕಳ ಬದುಕಿಗೆ ಬೆಳಕು: ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಆಶಯ

Update: 2025-10-19 22:17 IST

ಮಂಗಳೂರು , ಅ.19: ವಿಶೇಷ ಚೇತನ ಮಕ್ಕಳು ದೇವರ ಸಮಾನರಾಗಿದ್ದು ಅವರ ಬದುಕಿಗೆ ಬೆಳಕಾಗುವುದು ಸಮಾಜದ ಕರ್ತವ್ಯ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ರೈತ ಕುಡ್ಲ ಪ್ರತಿಷ್ಠಾನ ವತಿಯಿಂದ ನಗರದ ಕದ್ರಿ ಪಾರ್ಕ್ ನಲ್ಲಿ ಆಯೋಜಿಸಲಾದ ರೈತ ಮೇಳದಲ್ಲಿ ಚೇತನಾ ಬಾಲ ವಿಕಾಸ ಕೇಂದ್ರದ ಮಕ್ಕಳೊಂದಿಗೆ ದೀಪಾವಳಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೀಪಾವಳಿ ಕೃಷಿ ಬದುಕಿನ ಹಬ್ಬವಾಗಿದ್ದು, ರೈತ ಮೇಳದಲ್ಲಿ ಕೃಷಿ ಉತ್ಪನ್ನ ಗಳಿಗೆ ಮಾರುಕಟ್ಟೆ ಒದಗಿಸುವ ಮೂಲಕ ಕೃಷಿಕರ ಬದುಕಿ ಗೂ ಬೆಳಕು ನೀಡುವ ಕಾರ್ಯವಾಗಿದೆ ಎಂದು ಅವರು ಶ್ಲಾಘಿಸಿದರು.

ಶಾಸಕರಾದ ಡಿ.ವೇದವ್ಯಾಸ್ ಕಾಮತ್, ಡಾ. ವೈ. ಭರತ್ ಶೆಟ್ಟಿ, ದೇರಳಕಟ್ಟೆ ವಿದ್ಯಾರತ್ನ ಶಿಕ್ಷಣ ಸಂಸ್ಥೆ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಉದ್ಯಮಿ ಸತ್ಯೇಂದ್ರ ಶರ್ಮ, ಋತ್ವಿಕ್ ಕದ್ರಿ , ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ .ಬಿ .ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ರೈತ ಕುಡ್ಲ ಪ್ರತಿಷ್ಠಾನದ ಅಧ್ಯಕ್ಷ ಭರತ್ ರಾಜ್ ಸೊರಕೆ ಸ್ವಾಗತಿಸಿ, ಕಾರ್ಯದರ್ಶಿ ಲತೇಶ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News