ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಸಂದೇಶ : ಓರ್ವ ಆರೋಪಿ ಸೆರೆ
Update: 2025-10-21 21:19 IST
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಹಿಳೆಗೆ ಜಾತಿ ನಿಂದನೆ ಸಂದೇಶ ರವಾನಿಸಿದ ಆರೋಪದಲ್ಲಿ ಕಾವೂರು ಆಕಾಶಭವನದ ನಿವಾಸಿ ನಿಖಿಲ್ ರಾಜ್(27) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಅಭಿಷೇಕ್ ಆಚಾರ್ಯ ಎಂಬಾತನ ಸಾವಿನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ರವಾನಿಸಿದ್ದ ಸಂದೇಶಕ್ಕೆ ಪೂರಕವಾಗಿ ಜಾತಿ ನಿಂದನೆಯ ಶಬ್ದವನ್ನು ಬಳಸಿದ ಸಾಕ್ಷ್ಯಾಧಾರಗಳು ಲಭ್ಯವಾದ ಹಿನ್ನೆಲೆಯಲ್ಲಿ, ಆರೋಪಿ ನಿಖಿಲ್‌ರಾಜ್‌ನ್ನು ಬಂಧಿಸಲಾಗಿದೆ.
ಮಂಗಳೂರು ಕೇಂದ್ರ ಉಪ ವಿಭಾಗದ ಎಸಿಪಿ ಪ್ರತಾಪ್ ಸಿಂಗ್ ಥೋರಟ್ ಆರೋಪಿಯನ್ನು ದಸ್ತಗಿರಿ ಮಾಡಿ, ವಿಚಾರಣೆಗೊಳಪಡಿಸಿ, ಆತನು ಉಪಯೋಗಿಸುತ್ತಿದ್ದ ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಲಾಗಿದೆ.
ಹೆಚ್ಚಿನ ತನಿಖೆಗೆ ಒಳಪಡಿಸಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಈ ರೀತಿಯ ಕೃತ್ಯದಲ್ಲಿ ಭಾಗಿಯಾದವರ ವಿರುದ್ದ ಗಂಭೀರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.