×
Ad

ಸಿಎಂ ಸಿದ್ದರಾಮಯ್ಯ ಜಿಎಸ್‌ಟಿ ಸುಧಾರಣೆಗಳ ಜನಪ್ರಿಯತೆ ಅರಗಿಸಿಕೊಳ್ಳಲಾಗದೆ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ: ಸಂಸದ ಬ್ರಿಜೇಶ್ ಚೌಟ ಆರೋಪ

Update: 2025-10-21 21:45 IST

ಬ್ರಿಜೇಶ್ ಚೌಟ 

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರವು ಜಿಎಸ್‌ಟಿ ದರ ಕಡಿತದ ಮೂಲಕ ಜನ ಸಾಮಾನ್ಯರ ಮೇಲಿನ ತೆರಿಗೆ ಹೊರೆ ಇಳಿಸಿರುವುದು ಐತಿಹಾಸಿಕ ನಿರ್ಧಾರ. ಆದರೆ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ತಪ್ಪು ನಿರ್ಧಾರಗಳಿಂದ ಆರ್ಥಿಕ ಸ್ಥಿತಿ ಹಳ್ಳ ಹಿಡಿಸಿರುವ ಸಿಎಂ ಸಿದ್ದರಾಮಯ್ಯನವರು ಮೋದಿ ಸರಕಾರದ ಜಿಎಸ್‌ಟಿ ಸುಧಾರಣೆಗಳ ಜನಪ್ರಿಯತೆ ಅರಗಿಸಿಕೊಳ್ಳಲು ಸಾಧ್ಯವಾಗದೆ ಸುಳ್ಳು ಹೇಳಿಕೆ ನೀಡುವ ಮೂಲಕ ಹತಾಶೆ ವ್ಯಕ್ತಪಡಿ ಸುತ್ತಿದ್ದಾರೆ ಎಂದು ಸಂಸದ ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.

ಪುತ್ತೂರಿಗೆ ನಿನ್ನೆ ಭೇಟಿ ನೀಡಿದ್ದ ಸಿದ್ದರಾಮಯ್ಯನವರು ಕರ್ನಾಟಕ ಸೇರಿ ಇಡೀ ದೇಶದ ಜನರಿಗೆ ಅನುಕೂಲ ತಂದಿ ರುವ ಜಿಎಸ್‌ಟಿ ತೆರಿಗೆ ಇಳಿಕೆ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ ಎಂದು ಚೌಟ ಹೇಳಿದ್ದಾರೆ.

15,000 ಕೋಟಿ ರೂ. ಕರ್ನಾಟಕಕ್ಕೆ ನಷ್ಟವಾಗಿದೆ ಎಂದು ಸಿದ್ದರಾಮಯ್ಯನವರು ಹೇಳಿಕೆಗೆ ಯಾವುದೇ ಆಧಾರ ವಿಲ್ಲ. ತಮ್ಮ ಸರ್ಕಾರದ ಆರ್ಥಿಕ ಅಧೋಗತಿಯನ್ನು ಮುಚ್ಚಿ ಹಾಕುವುದಕ್ಕೆ ಪದೇಪದೇ ಮೋದಿ ಸರಕಾರದ ಮೇಲೆ ಗೂಬೆಕೂರಿಸುವ ಅತ್ಯಂತ ಕೀಳು ಮಟ್ಟದ ರಾಜಕೀಯ ಮಾಡುತ್ತಿರುವುದು ಸಿದ್ದರಾಮಯ್ಯನವರಿಗೆ ಶೋಭೆ ತರುವು ದಿಲ್ಲ. ಮೋದಿ ಸರ್ಕಾರವು ಜಿಟಿಎಸ್ ಸ್ಲ್ಯಾಬ್ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತಂದಿರುವುದರಿಂದ ದೇಶದ ಪ್ರತಿಯೊಬ್ಬ ನಾಗರಿಕರಿಗೂ ಆರ್ಥಿಕ ಲಾಭವುಂಟು ಮಾಡಿದೆ. ಆದರೆ, ಯಾವುದೇ ಅಂಕಿ-ಅಂಶ ಅಥವಾ ದಾಖಲೆ ಯಿಲ್ಲದೆ ಸಿದ್ದರಾಮಯ್ಯನವರು ಸಾರ್ವಜನಿಕ ವೇದಿಕೆಯಲ್ಲಿ ನಿಂತು ಜನರನ್ನು ದಾರಿತಪ್ಪಿಸುವ ಹೇಳಿಕೆ ನೀಡುತ್ತಿ ದ್ದಾರೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ತನ್ನ ಎಲ್ಲ ಆರ್ಥಿಕ ವೈಫಲ್ಯ, ಭ್ರಷ್ಟ ಆಡಳಿತ ಮತ್ತು ದುಂದು ವೆಚ್ಚಗಳಿಗೆ ಕೇಂದ್ರದ ಮೇಲೆ ದೂಷಣೆ ಮಾಡುವುದನ್ನೇ ಸಿದ್ದರಾಮಯ್ಯನವರು ತಮ್ಮ ರಾಜಕೀಯ ಅಜೆಂಡಾ ಮಾಡಿಕೊಂಡಿದ್ದಾರೆ. ಅಸಂಬದ್ಧ ಗ್ಯಾರಂಟಿ ಯೋಜನೆ, ಮುಡಾ ಹಗರಣ, ವಾಲ್ಮೀಕಿ ಹಗರಣ ಹೀಗೆ ಸಿದ್ದರಾಮಯ್ಯನವರ ದುರಾಡಳಿತಕ್ಕೆ ದೊಡ್ಡ ಪಟ್ಟಿಯೇ ಇದೆ. ಇದನ್ನೆಲ್ಲ ಮುಚ್ಚಿ ಹಾಕುವುದಕ್ಕೆ ಇಡೀ ದೇಶವೇ ಸ್ವಾಗತಿಸಿರುವ ಜಿಎಸ್ಟಿ ಸುಧಾರಣೆಗಳ ಬಗ್ಗೆ ಈ ರೀತಿ ಬೇಜವಾಬ್ದಾರಿಯಿಂದ ಇಲ್ಲ-ಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಸರಿಯಲ್ಲ ಎಂದು ಚೌಟ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News