ಮಂಗಳೂರು ತಾಪಂ ಮಾಜಿ ಸದಸ್ಯ ಸಿರಾಜ್ ಉಳಾಯಿಬೆಟ್ಟು ನಿಧನ
Update: 2025-10-24 18:42 IST
ಮಂಗಳೂರು: ಮಂಗಳೂರು ತಾಪಂ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಮುಹಮ್ಮದ್ ಸಿರಾಜ್ ಉಳಾಯಿಬೆಟ್ಟು (54) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪತ್ನಿ ಮತ್ತು ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಮೃತರು ಅಗಲಿದ್ದಾರೆ.
ವೃತ್ತಿಯಲ್ಲಿ ಮಾವಿನ ವ್ಯಾಪಾರಿಯಾಗಿದ್ದ ಸಿರಾಜುದ್ದೀನ್ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದರು. ಸಿರಾಜ್ ಮೋನು ಎಂದೇ ಸ್ಥಳೀಯವಾಗಿ ಜನಪ್ರಿಯರಾಗಿದ್ದರು. ಗುರುಪುರ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
*ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕ ಮೊಯ್ದಿನ್ ಬಾವ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಮಾಜಿ ತಾಪಂ ಸದಸ್ಯ ಎನ್.ಇ.ಮುಹಮ್ಮದ್ ಮಲ್ಲೂರು ಮತ್ತಿತರರು ಅಂತಿಮ ದರ್ಶನ ಪಡೆದರು.