ಗಾಂಜಾ ಸೇವನೆ ಆರೋಪ: ಇಬ್ಬರ ಬಂಧನ
ಮಂಗಳೂರು, ಅ.25: ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
*ಶುಕ್ರವಾರ ಮಧ್ಯಾಹ್ನ 2:45ಕ್ಕೆ ಜಪ್ಪಿನಮೊಗರು ಕಡೆಕಾರ್ ಬಳಿ ನೇತ್ರಾವತಿ ನದಿ ಸೇತುವೆ ಕೆಳಗಡೆ ಖಾಲಿ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಆರೋಪದಲ್ಲಿ ಅಬ್ದುಲ್ ಮುನಾಝ್ (29) ಎಂಬಾತನನ್ನು ಎಸ್ಸೈ ಶಿವಕುಮಾರ್ ಬಂಧಿಸಿದ್ದಾರೆ.
*ನಗರದ ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದ ಮೇರೆಗೆ ಮುಹಮ್ಮದ್ ನಿಝಾಮುದ್ದೀನ್ (30) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ವಿಚಾರಣೆ ವೇಳೆ ಗಾಂಜಾ ಸೇವಿಸಿರುವುದನ್ನು ಒಪ್ಪಿಕೊಂಡಿದ್ದಾನೆ. ಇಬ್ಬರನ್ನೂ ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢ ಪಟ್ಟಿದೆ. ಆರೋಪಿಗಳ ವಿರುದ್ಧ ಎನ್ ಡಿಪಿಎಸ್ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕಂಕನಾಡಿ ನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ.