×
Ad

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಬಂಟ್ವಾಳದ ಡೈಮಂಡ್ ಇಂಟರ್‌ ನ್ಯಾಷನಲ್ ಸ್ಕೂಲ್ ಚಾಂಪಿಯನ್

Update: 2025-10-27 19:57 IST

ಮೂಡುಬಿದಿರೆ: ಶೋರಿನ್ ರಿಯೂ ಕರಾಟೆ ಅಸೋಸಿಯೇಷನ್, ಎಂ.ಕೆ.ಅನಂತ್ರಾಜ್ ಫಿಸಿಕಲ್ ಎಜುಕೇಶನ್ ಹಾಗೂ ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸೆಂಟರ್ ಆಶ್ರಯದಲ್ಲಿ ಮೂಡುಬಿದಿರೆಯ ಕನ್ನಡ ಭವನದಲ್ಲಿ ನಡೆದ 8 ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟದಲ್ಲಿ ಬಂಟ್ವಾಳದ ಡೈಮಂಡ್ ಇಂಟರ್ನ್ಯಾಷನಲ್ ಸ್ಕೂಲ್ ಓವರ್ ಆಲ್ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡಿದೆ.

ಬೆಳ್ಮಣ್ ನ ಬುಡೋಕಾನ್ ಕರಾಟೆ & ಸೆಲ್ಫ್ ಡಿಫೆನ್ಸ್ ಸ್ಕೂಲ್ ರನ್ನರ್ಸ್ ಚಾಂಪಿಯನ್ ಪ್ರಶಸ್ತಿಯನ್ನು ಪಡೆದು ಕೊಂಡಿದೆ. ರಝಾನಗರದ ಬುರೂಜ್ ಆಂಗ್ಲ ಮಾಧ್ಯಮ ಶಾಲೆ,ಮೂಡುಬಿದಿರೆಯ ಅಜುಮ್ ಅಲ್ ಬಿರ್ರ್ ಇಂಟರ್ನ್ಯಾಷನಲ್ ಸ್ಕೂಲ್, ಅಡ್ಡೂರಿನ ಸಹಾರ ಆಂಗ್ಲಮಾಧ್ಯಮ ಶಾಲೆ ಹಾಗೂ ಮಂಗಳೂರಿನ ಅಲ್ ಹುದಾ ಇಂಟರ್ನ್ಯಾಷನಲ್ ಸ್ಕೂಲ್ ಉತ್ತಮ ಪ್ರದರ್ಶನ ನೀಡಿದ ತಂಡಗಳಾಗಿ ಪ್ರಶಸ್ತಿ ಪಡಕೊಂಡಿತು.‌

ಮಾಜಿ ಸಚಿವ ಕೆ.ಅಭಯಚಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ಮುಖಂಡ ಸುದರ್ಶನ ಎಂ., ಎಂ.ಕೆ. ಅನಂತ್ರಾಜ್ ಫಿಸಿಕಲ್ ಎಜುಕೇಶನ್ ನ ಪ್ರಾಂಶುಪಾಲರಾದ ಧನಂಜಯ ಶೆಟ್ಟಿ, ಶೊರಿನ್ ರಿಯೂ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಅಬುಲ್ ಅಲಾ ಪುತ್ತಿಗೆ, ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ಡಾ.ರಾಹುಲ್ ಟಿ.ಜಿ., ಉಪಾಧ್ಯಕ್ಷ ಅರುಣ್ ಕುಮಾರ್ ನಿಟ್ಟೆ, ಅಂತರಾಷ್ಟ್ರೀಯ ತರಬೇತುದಾರ ಸ್ವಾಮಿ ಪ್ರಸಾದ್, ರಾಜ್ಯ ಕರಾಟೆ ಶಿಕ್ಷಕರ ಸಂಘದ ಉಪಾಧ್ಯಕ್ಷ ಸತೀಶ್ ಬೆಳ್ಮಣ್, ಪ್ರಧಾನ ಕಾರ್ಯದರ್ಶಿ ರವಿ ಕೋಟ್ಯಾನ್, ಕೀರ್ತಿ ಜಿ.ಕೆ., ವಾಮನ್ ಪಾಲನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಬಹುಮಾನ ವಿತರಿಸಿದರು.

ರಾಜ್ಯ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷರಾದ ಮುಹಮ್ಮದ್ ನದೀಮ್ ಹಾಗೂ ಸಂಘಟನಾ ಕಾರ್ಯದರ್ಶಿ ರಾಜೇಶ್ ಅಂಚನ್ ಈ ಪಂದ್ಯದ ತೀರ್ಪುಗಾರರಾಗಿದ್ದರು. ಶಿಕ್ಷಕ ನವೀನ್ ಅಂಬೂರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News