ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಸಮಿತಿ ಸಭೆ
ಮಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಸಮಿತಿ ಸಭೆಯು ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆಯಿತು.
ರಾಷ್ಟ್ರೀಯ ಉಪಾಧ್ಯಕ್ಷೆ ರೈಹಾನತ್ ಕೇರಳ ರವರು ಮುಖ್ಯ ಅತಿಥಿಯಾಗಿ ಆಗಮಿಸಿ ಸಭೆಯ ಉದ್ಘಾಟನೆಯನ್ನು ಮಾಡುತ್ತಾ ಚುನಾವಣಾ ಆಯೋಗವು ದೇಶಾದ್ಯಂತ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯನ್ನು ನಡೆಸಲು ಮುಂದಾಗಿದೆ. ಜನಪ್ರತಿನಿಧಿ ಕಾಯ್ದೆ 1950 ಸೆಕ್ಷನ್ 21 ರ ಪ್ರಕಾರ ಮತದಾರರ ಪಟ್ಟಿ ಪರಿಷ್ಕರಣೆ ( SIR) ಸಮ್ಮತಾರ್ಹವೂ ಆಗಿದೆ. ಮತದಾನಕ್ಕೆ ಅರ್ಹವಾದ ದಾಖಲೆಗಳನ್ನು ನೀಡಿದರೂ ಅವುಗಳನ್ನು ಅನರ್ಹ ಗೊಳಿಸಿದ ಕಾರಣ, 65 ಲಕ್ಷ ಬಡ ಅಲ್ಪಸಂಖ್ಯಾತ , ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕಲಾಗಿದೆ ಎಂದು ಹೇಳಿದರು.
ದೇಶದ ಜನತೆಯ ನಂಬಿಕೆಯನ್ನು ಕಾಪಾಡಿಕೊಳ್ಳುವಲ್ಲಿ ವಿಫಲವಾಗಿರುವ ಚುನಾವಣಾ ಆಯೋಗ ಇದೀಗ ನಡೆಸಲು ಮುಂದಾಗಿರುವ ಎಸ್ಐಆರ್ ಯೋಜನೆ ಕೂಡಾ ಹಲವು ಅನುಮಾನಗಳಿಗೆ ಎಡೆ ಮಾಡಿ ಕೊಡುತ್ತಿದ್ದು , ಪಕ್ಷಪಾತ ಧೋರಣೆಯು ಸಕ್ರಿಯವಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇದು ನಿರ್ದಿಷ್ಟ ವರ್ಗಗಳ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಹಾಗಾಗಿ ಈ ಎಸ್ ಐ ಆರ್ ಪ್ರಕ್ರಿಯೆಯ ಬಗ್ಗೆ ಜನತೆಗೆ ಜಾಗೃತಿ ಮೂಡಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಈ ಸಭೆಯಲ್ಲಿ ಮಹಿಳೆಯರ ಸ್ಥಿತಿಗತಿಗಳ ಬಗ್ಗೆ ಚರ್ಚಿಸಿ, ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷೆ ಶಾಝಿಯ ಬೆಂಗಳೂರು, ಕಾರ್ಯದರ್ಶಿಗಳಾದ ಝುಲೈಖ ಬಜ್ಪೆ ಹಾಗೂ ಸಾನಿಯಾ ಮೈಸೂರ್, ಶಾಹಿದಾ ತಸ್ನೀಮ್ , ರಮ್ಲತ್, ನಾಝಿಯ ಕಾಪು, ಜಬೀನ್ ಮೈಸೂರು,ಹಾಜರಿದ್ದರು.. ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆಯವರು ಸ್ವಾಗತಿಸಿ ವರದಿಯನ್ನು ವಾಚಿಸಿದರು ಹಾಗೂ ರಾಜ್ಯ ಕಾರ್ಯದರ್ಶಿ ಝುಲೈಖರವರು ಧನ್ಯವಾದವಿತ್ತರು.