ಮಾದಕ ವಸ್ತು ಸೇವಿಸಿದ ಆರೋಪ: ಓರ್ವ ಸೆರೆ
Update: 2025-10-28 20:18 IST
ಮಂಗಳೂರು, ಅ.28: ಮಾದಕ ವಸ್ತುವನ್ನು ಸೇವಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬನ್ನು ಉಳ್ಳಾಲ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಆರೋಪಿ ಭರತ್ ರಾಜ್ (25) ಉಳ್ಳಾಲ ತಾಲೂಕು ಸೋಮೇಶ್ವರ ಗ್ರಾಮದ ದ್ವಾರಕನಗರ ಪರಿಸರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೋ ಮಾದಕ ವಸ್ತುವನ್ನು ಸೇವಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದಾಗ ಉಳ್ಳಾಲ ಠಾಣಾ ಪಿಎಸ್‌ಐ ಸಂತೋಷ್ ಕುಮಾರ್ ಅವರನ್ನು ವಶಕ್ಕೆ ತೆಗೆದುಕೊಂಡರು. ಬಳಿಕ ಆತನನ್ನು ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ, ಆತ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.