×
Ad

ಯಕ್ಷಗಾನದ ಮೂಲಕ ಕಲೆ, ಸಂಸ್ಕೃತಿಯನ್ನು ಉಳಿಸುವ ಕೆಲಸ ಆಗಿದೆ: ಬ್ರಿಜೇಶ್ ಚೌಟ

Update: 2026-01-04 19:49 IST

ಮಂಗಳೂರು,ಜ.4;ಯಕ್ಷಗಾನದ ಮೂಲಕ ಈ ನೆಲದ ಕಲೆ ಮತ್ರು ಸಂಸ್ಜೃತಿಯನ್ನು ಉಳಿಸುವ ಕೆಲಸ ಆಗಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಅವರು ರವಿವಾರ ಅಡ್ಯಾರ್ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕಗಳ ಸಹಯೋಗ ದೊಂದಿಗೆ ನಡೆದ ಯಕ್ಷಧ್ರುವ-ಯಕ್ಷ ಶಿಕ್ಷಣ ಯೋಜನೆಯ ವಿದ್ಯಾರ್ಥಿಗಳ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26 ವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಕರಾವಳಿಯ ಜನತೆ ಇಲ್ಲಿನ ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿ ಸಿಕೊಂಡು ಬದುಕುತ್ತಿರುವವರು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ  ಬ್ರಿಜೇಶ್ ಚೌಟ ತಿಳಿಸಿದರು.

ಯಕ್ಷಗಾನದ ಮೂಲಕ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದೇಶ ಕಟ್ಟುವ ರಾಷ್ಟ್ರೀಯ ನಿರ್ಮಾಣದ ಕೆಲಸ ಮಾಡುತ್ತಿದೆ. ಯಕ್ಷಗಾನಕ್ಕೆ ದೀರ್ಘಕಾಲಿಕವಾದ ಇತಿಹಾಸ ಇದೆ. ಇದು ಹೀಗೆಯೆ ಮುಂದುವರಿಯಲಿ ಎಂದವರು ತಿಳಿಸಿದರು.

ಯಕ್ಷಗಾನ ಶ್ರೇಷ್ಠಕಲೆ. ವಿಶ್ವಮಟ್ಟದಲ್ಲಿ ಬೆಳೆಯುತ್ತಿದೆ. ದೇಶ ಉಳಿಯ ಬೇಕಾದರೆ ನಮ್ಮ ಸಂಸ್ಕೃತಿ ಬೆಳೆಯಬೇಕು, ಉಳಿಯ ಬೇಕು, ಶಾಲಾ ಕಾಲೇಜುಗಳ ಪ್ರೋತ್ಸಾಹ ಮತ್ತು ಪೋಷಕರ ಬೆಂಬಲದಿಂದ ಇಂತಹ ಕಾರ್ಯಕ್ರಮ ಗಳನ್ನು ಆಯೋಜಿಸಲು ಸಾಧ್ಯವಾಯಿತು ಎಂದು ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.

ಸಮಾರಂಭದಲ್ಲಿ ಉದ್ಯಮಿ, ಕಲಾಪೋಷಕ ಬೆಳಿಯೂರುಗುತ್ತು ಎಂ ರವೀಂದ್ರನಾಥ ಆಳ್ವ, ಯಕ್ಷಧ್ರುವ ಯಕ್ಷಶಿಕ್ಷಣದ ಪ್ರಧಾನ ಸಂಚಾಲಕ ಪಣಂಬೂರು ವಾಸುದೇವ ಐತಾಳ, ಉದ್ಯಮಿ ಕೆ ಜಯರಾಮ ಶೇಖ ಅಡ್ಯಾರ್, ಪಟ್ಲ ಫೌಂಡೇಶನ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಕೆ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಬಾಳ ಜಗನ್ನಾಥ ಶೆಟ್ಟಿ, ಕೇಂದ್ರೀಯ ಮಹಿಳಾ ಘಟಕದ ಗೌರವಾಧ್ಯೆಕ್ಷೆ ಆರತಿ ಆಳ್ವ, ಅಧ್ಯೆಕ್ಷೆ ಪೂರ್ಣಿಮ ಯತೀಶ್ ರೈ, ಪ್ರಭಾಕರ ಜೋಷಿ, ಯಕ್ಷಧ್ರುವ ಯಕ್ಷಶಿಕ್ಷಣದ ಸಂಯೋಜಕ ದೀವಿತ್ ಎಸ್ ಕೆ ಪೆರಾಡಿ ಹಾಗೂ ವಿವಿಧ ಘಟಕಗಳ ಅಧ್ಯಕ್ಷರು ಉಪಸ್ಥಿತರಿದ್ದರು.

ಪುರುಷೋತ್ತಮ‌ ಭಂಡಾರಿ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಸಲಹಾ ಸಮಿತಿ ಸದಸ್ಯ ದೇವದಾಸ ಶೆಟ್ಟಿ ಬಂಟ್ವಾಳ ಕಾರ್ಯಕ್ರಮ‌ ನಿರ್ವಹಿಸಿದರು.

ಮೂರನೇ ವರ್ಷದ ಯಕ್ಷದ್ರುವ ಯಕ್ಷಶಿಕ್ಷಣ ಯೋಜನೆಯ ಯಕ್ಷದ್ರುವ ವಿದ್ಯಾರ್ಥಿ ಸಮ್ಮಿಲನದಲ್ಲಿ 16 ಶಾಲೆಗಳ 650 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎರಡು ವೇದಿಕೆಗಳಲ್ಲಿ ಕಾರ್ಯಕ್ರಮ‌ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News