×
Ad

ದೇರಳಕಟ್ಟೆ: 'ಅನ್ಸಾರುಲ್ ಮುಸ್ಲಿಮೀನ್'ನಿಂದ ಧಾರ್ಮಿಕ ಪ್ರವಚನ ಕಾರ್ಯಕ್ರಮ

Update: 2026-02-01 12:10 IST

ಉಳ್ಳಾಲ: ದೇರಳಕಟ್ಟೆಯ ಬದ್ರಿಯಾ ಜುಮಾ ಮಸೀದಿ ಅಧೀನದ ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ ವತಿಯಿಂದ ಏಕದಿನ ಧಾರ್ಮಿಕ ಪ್ರವಚನ ಕಾರ್ಯಕ್ರಮ ದೇರಳಕಟ್ಟೆ ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯಿತು.

ದೇರಳಕಟ್ಟೆ ಬದ್ರಿಯಾ ಜುಮಾ ಮಸೀದಿ ಖತೀಬ್ ಮುಹಮ್ಮದ್ ತಾಜುದ್ದೀನ್ ರಹ್ಮಾನಿ ದುಆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ ಅಧ್ಯಕ್ಷ ಇಲ್ಯಾಸ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಅಬೂಬಕರ್ ಸಿದ್ದೀಕ್ ಅಝ್ಹರಿ ಪಯ್ಯನ್ನೂರು ಮುಖ್ಯ ಭಾಷಣ ಮಾಡಿದರು.

ದೇರಳಕಟ್ಟೆ ಬದ್ರಿಯಾ ಜುಮಾ ಮಸೀದಿಯ ಗೌರವಾಧ್ಯಕ್ಷ ಅಬ್ದುಲ್ ಖಾದರ್, ಅಧ್ಯಕ್ಷ ಅಬ್ದುಲ್ ರಹ್ಮಾನ್ ಶೇಟ್, ಮಾಜಿ ಅಧ್ಯಕ್ಷರಾದ ಅಬ್ಬಾಸ್ ಹಾಜಿ, ಅಬೂಬಕರ್ ಹಾಜಿ ನಾಟೆಕಲ್, ಬೆಳ್ಮ ಗ್ರಾಪಂ ಸದಸ್ಯ ಇಕ್ಬಾಲ್ ಎಚ್.ಆರ್., ಹಯಾತುಲ್ ಇಸ್ಲಾಮ್ ಮದ್ರಸ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ.ಎಂ.ಇಬ್ರಾಹೀಂ ಖತರ್, ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ ಉಪಾಧ್ಯಕ್ಷ ಇಸ್ಮಾಯೀಲ್ ರಹ್ಮತುಲ್ಲಾ ಉಪಸ್ಥಿತರಿದ್ದರು.

ಹದಾಯತುಲ್ ಇಸ್ಲಾಮ್ ಮದ್ರಸ ಅಧ್ಯಾಪಕ ಮುಸ್ಫೀಕ್ ಯಾಮಾನಿ ಕಿರಾಅತ್ ಪಠಿಸಿದರು.

ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ ಪ್ರ. ಕಾರ್ಯದರ್ಶಿ ಅಬ್ದುಲ್ ಮುತ್ತಲಿಬ್ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಶಿಹಾಬುದ್ದೀನ್ ಡಿ. ವಂದಿಸಿದರು. ಹದಾಯತುಲ್ ಇಸ್ಲಾಂ ಮದ್ರಸ ಅಧ್ಯಾಪಕ ಝಕರಿಯ ಅಸ್ಲಮಿ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News