×
Ad

ಬಜೆಟ್| ವಿಕಸಿತ ಭಾರತಕ್ಕೆ ಭದ್ರ ತಳಹದಿ: ನಳಿನ್‌ ಕುಮಾರ್ ಕಟೀಲ್

Update: 2026-02-01 20:25 IST

ಮಂಗಳೂರು : ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸಲು ಈ ಬಜೆಟ್ ಭದ್ರ ತಳಹದಿಯಾಗಿದೆ. ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ ಸಹಿತ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ, ದೇಶದ ಸರ್ವಾಂಗೀಣ ಪ್ರಗತಿಗೆ ಪೂರಕವಾದ ಬಜೆಟ್ ಮಂಡನೆಯಾಗಿದೆ ಎಂದು ಮಾಜಿ ಸಂಸದ ನಳಿನ್‌ ಕುಮಾರ್ ಕಟೀಲ್ ತಿಳಿಸಿದ್ದಾರೆ.

ತೆಂಗಿನಕಾಯಿ, ಕೊಕ್ಕೊ ಬೆಳೆಗಳಿಗೆ ಆರ್ಥಿಕ ಬೆಂಬಲ ನೀಡುವ ಮೂಲಕ ಕೃಷಿ ಅಭಿವೃದ್ಧಿಗೆ ಉತ್ತೇಜಿಸಿರುವುದು ಕರಾವಳಿ ಭಾಗದ ಕೃಷಿಕರಿಗೆ ವರದಾನವಾಗಲಿದೆ. ಮೀನುಗಾರಿಕಾ ಕ್ಷೇತ್ರವನ್ನು ಬಲಪಡಿಸಲು ಸುಂಕ ವಿನಾಯಿತಿ, ಸಮುದ್ರ ಉತ್ಪನ್ನಗಳ ರಫ್ತು ಹೆಚ್ಚಳ ಘೋಷಿಸಿರುವುದು ಸ್ವಾಗತಾರ್ಹ. ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಆಮೆ ಹಾದಿಗಳನ್ನು ಅಭಿವೃದ್ಧಿ ಪಡಿಸುವ ಯೋಜನೆ ಘೋಷಿಸಿದ್ದು ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡಲಿದೆ. ಬಡವರ, ಮಧ್ಯಮ ವರ್ಗದವರ, ಮಹಿಳೆಯರ , ಯುವಕರ ಹಿತ ಕಾಯುವ ಸರ್ವ ಸ್ಪರ್ಶಿ ಬಜೆಟ್ ಇದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News