×
Ad

ಬಜೆಟ್ ನಲ್ಲಿ ಯಾವುದೇ ಹೊಸ ಹೊಸ ಯೋಜನೆಗಳಿಲ್ಲ: ಹರೀಶ್ ಕುಮಾರ್

Update: 2026-02-01 20:46 IST

‘‘ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿರುವ ಬಜೆಟ್ ನಲ್ಲಿ ಯಾವುದೇ ಹೊಸ ಹೊಸ ಯೋಜನೆಗಳಿಲ್ಲ. ಸಾಲ ಮಾಡಿಯಾದರೂ ತುಪ್ಪ ತಿನ್ನು ಎನ್ನುವ ಹಾಗೆ ಒಟ್ಟು ಬಜೆಟ್‌ನಲ್ಲಿ 16.9 ಲಕ್ಷ ಕೋಟಿ ಸಾಲ ಮಾಡುತ್ತಿರುವ ಮೋದಿ-ನಿರ್ಮಲಾ ಸೀತಾರಾಮನ್ ಅವರ ಸಾಲದ ಸರಕಾರ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ -ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.

ಚುನಾವಣಾ ಹೊಸ್ತಿಲಲ್ಲಿರುವ ರಾಜ್ಯಗಳಿಗೆ ಬಂಪರ್ ಕೊಡುಗೆ ನೀಡಲಾಗಿದೆ. ರೈತರ ಕೃಷಿ ಸಾಲ ಮನ್ನಾ ಬಗ್ಗೆ ಬಜೆಟ್‌ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ. ಕೆಳ, ಮಧ್ಯಮ ಕುಟುಂಬಗಳಿಗೆ ಹೊರೆಯಾಗಿದೆ. ಕೇಂದ್ರ ಸರಕಾರ ಹಿಂದಿನಿಂದಲೂ ಅನುಸರಿಸಿಕೊಂಡು ಬಂದಿರುವ ತಾರತಮ್ಯ ನೀತಿಯನ್ನು ಮತ್ತೆ ಮುಂದುವರಿಸುತ್ತಿದ್ದು, ಮತ್ತೊಮ್ಮೆ ಕರ್ನಾಟಕಕ್ಕೆ ನಿರ್ಮಲಮ್ಮನ ಉಂಡೆನಾಮ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News