ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
Update: 2026-03-06 20:21 IST
ಮಂಗಳೂರು, ಮಾ.6: ಅಧಿಕ ಬಡ್ಡಿ ಕೊಡುವುದಾಗಿ ಹೇಳಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಬಳಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂದರ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ನೆಲ್ಲೂರಿನ ಲಕ್ಕು ಕೊಂಡಾ ರೆಡ್ಡಿ (46) ಬಂಧಿತ ಆರೋಪಿಯಾಗಿದ್ದಾನೆ. ಈತ 2015ರಲ್ಲಿ ಮೈತ್ರಿ ಪ್ಲಾಂಟೇಶನ್ ಆ್ಯಂಡ್ ಹಾರ್ಟಿಕಲ್ಚರ್ ಪ್ರೈ.ಲಿ. ಇದರ ಹೆಸರಿನಲ್ಲಿ ಅಧಿಕ ಬಡ್ಡಿ ಕೊಡುವುದಾಗಿ ಹೇಳಿ ಸಾರ್ವಜನಿಕ ರಿಂದ ಹಣ ಸಂಗ್ರಹಿಸಿ ಬಳಿಕ ವಂಚಿಸಿದ್ದ. 2018ರ ಬಳಿಕ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಕೊಂಡಿದ್ದ. ಈತನ ಇರುವಿಕೆಯ ಬಗ್ಗೆ ಮಾಹಿತಿ ಪಡೆದ ಬಂದರ್ ಪೊಲೀಸರು ಗುರುವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.