×
Ad

ವಿವಿ, ಕಾಲೇಜುಗಳಲ್ಲಿ ಚುನಾವಣೆ ಘೋಷಣೆ: ಸಿಎಂಗೆ ಅಭಿನಂದಿಸಿದ ಸವಾದ್ ಸುಳ್ಯ

Update: 2026-03-08 22:55 IST

ಮಂಗಳೂರು: ಕರ್ನಾಟಕದಲ್ಲಿ ವಿಶ್ವವಿದ್ಯಾನಿಲಯ ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ಮರುಪ್ರಾರಂಭಿಸಲು ಘೋಷಿಸಿದ ಕರ್ನಾಟಕ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರನ್ನು ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯರಾದ ಸವಾದ್ ಸುಳ್ಯ ಅವರು ಶನಿವಾರ ಮಂಗಳೂರಿಗೆ ಆಗಮಿಸಿದ್ದ ವೇಳೆ  ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ, ಕರ್ನಾಟಕ ರಾಜ್ಯ ಅಲೈಡ್ ಹೆಲ್ತ್ ಸೈನ್ಸಸ್ ಅಧ್ಯಕ್ಷರಾದ ಯು.ಟಿ. ಇಫ್ತಿಕಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ, ಮನಪಾ ಮಾಜಿ ಮೇಯರ್ ಶಶಿಧರ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News