ಕೋವಿಡ್ ಪ್ರಕರಣ; ದ.ಕ.ಜಿಲ್ಲೆಯಲ್ಲಿ ಶನಿವಾರ 1 ಪಾಸಿಟಿವ್
Update: 2023-12-23 22:23 IST
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಶನಿವಾರ 16 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ ಒಬ್ಬ ವ್ಯಕ್ತಿಯಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.
ಹುಬ್ಬಳ್ಳಿ ಮೂಲದ ಸುಮಾರು 33 ವರ್ಷ ಪ್ರಾಯದ ವ್ಯಕ್ತಿಗೆ ಎರಡು ದಿನಗಳಿಂದ ಜ್ವರ ಕಾಣಿಸಿಕೊಂಡಿದ್ದು, ಅವರನ್ನು ಚಿಕಿತ್ಸೆ ಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ಕಾಣಿಸಿಕೊಂಡಿದೆ. ಹಾಗಾಗಿ ಅವರು ಇದೀಗ ಹೋಮ್ ಐಸೋಲೇಶನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದ.ಕ.ದಲ್ಲಿ ಈವರೆಗೆ ಮೂವರಲ್ಲಿ ಪಾಸಿಟಿವ್ ಕಂಡು ಬಂದಿದೆ. ಈಗಾಗಲೆ ಒಬ್ಬರು ಮೃತಪಟ್ಟಿದ್ದಾರೆ. ಹಾಗಾಗಿ ಆರೋಗ್ಯ ಇಲಾಖೆಯು ಎಚ್ಚೆತ್ತುಕೊಂಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಪರೀಕ್ಷೆ ನಡೆಸಲು ಮುಂದಾಗಿದೆ.