×
Ad

ಯಕ್ಷಧ್ರುವ ಪಟ್ಲ ಫೌಂಡೇಶನಿಗೆ 10 ಲಕ್ಷ ರೂ.ಪ್ರೋತ್ಸಾಹಧನ ವಿತರಣೆ

Update: 2025-02-15 18:19 IST

ಮಂಗಳೂರು,ಫೆ.15: ಯಕ್ಷಗಾನವನ್ನು ಸರಕಾರಿ ಶಾಲೆಗಳಲ್ಲಿ ಉಚಿತವಾಗಿ ಕಲಿಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಱಯಕ್ಷಗಾನಂ ವಿಶ್ವಗಾನಂ ಯೋಜನೆಯಡಿ ಯಕ್ಷಗಾನ ತರಬೇತಿ ತರಗತಿಗಳನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾ ಗಿದೆ. ಈ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ 2024-25ನೇ ಸಾಲಿನ ಬಜೆಟ್‌ನಲ್ಲಿ ಅಂದಿನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ವರುಣ್ ಚೌಟ ಘೋಷಿಸಿದ 10 ಲಕ್ಷ ರೂ. ಪ್ರೋತ್ಸಾಹಧನವನ್ನು ಮೇಯರ್ ಮನೋಜ್ ಕುಮಾರ್ ಶನಿವಾರ ಪಟ್ಲ ಫೌಂಡೇಶನ್ ಕೇಂದ್ರೀಯ ಸಮಿತಿಯ ಜತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕನಗರ ಮೂಲಕ ಟ್ರಸ್ಟಿಗೆ ವಿತರಿಸಿದರು.

ಈ ಸಂದರ್ಭ ಉಪ ಮೇಯರ್ ಭಾನುಮತಿ, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ವಿಪಕ್ಷ ನಾಯಕ ಅನಿಲ್ ಕುಮಾರ್, ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮನೋಹರ್ ಶೆಟ್ಟಿ, ಸುಮಿತ್ರ ಕರಿಯ, ಸರಿತಾ ಶಶಿಧರ್, ವೀಣಾ ಮಂಗಳ, ಮಾಜಿ ಮೇಯರ್ ಶಶಿಧರ ಹೆಗ್ಡೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News